ಎಚ್‌ಡಿಡಿ ಹುಟ್ಟುಹಬ್ಬದಂದು ಚಿಕ್ಕಮ್ಮ ದೇವಾಲಯದಲ್ಲಿ ವಿಶೇಷ ಪೂಜೆ

KannadaprabhaNewsNetwork |  
Published : May 19, 2026, 01:45 AM IST
ಬಾಗೂರು (ನುಗ್ಗೇಹಳ್ಳಿ ): ಜೆಡಿಎಸ್ ವರಿಷ್ಠ  ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ  94ನೇ ಹುಟ್ಟುಹಬ್ಬ ಅಂಗವಾಗಿ  ಗ್ರಾಮದ ಗ್ರಾಮ ದೇವತೆ  ಸಂತೆಕಾಳೇಶ್ವರಿ ಚಿಕ್ಕಮ್ಮ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಮುಖಂಡರು  ವಿಶೇಷ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು. | Kannada Prabha

ಸಾರಾಂಶ

ಶ್ರೀ ಸಂತೆಕಾಳೇಶ್ವರಿ ಚಿಕ್ಕಮ್ಮ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಎಚ್ ಡಿ ದೇವೇಗೌಡರಿಗೆ ಉತ್ತಮ ಆರೋಗ್ಯ ಯಶಸ್ಸು ಲಭಿಸಲಿ ಎಂದು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸಾರ್ವಜನಿಕರು ದೇವರಲ್ಲಿ ಪ್ರಾರ್ಥಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಬಿ ಎಚ್ ಶಿವಣ್ಣ ಮಾತನಾಡಿ ಹಾಸನ ಜಿಲ್ಲೆಯ ಹಾಗೂ ಕರ್ನಾಟಕದ ಏಕೈಕ ಮಣ್ಣಿನ ಮಗ ಈ ದೇಶದ ಕೆಂಪುಕೋಟೆಯ ಮೇಲೆ ಭಾರತದ ಧ್ವಜ ಹಾರಿಸುವ ಮೂಲಕ ಪ್ರಧಾನಿ ಹುದ್ದೆಗೇರಿದರು ಇದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ಪಡುವ ವಿಚಾರ. ಮುಂಬರುವ ದಿನಗಳಲ್ಲಿ ಎನ್ ಡಿ ಎ ಮೈತ್ರಿಕೂಟದ ವತಿಯಿಂದ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಬಾಗೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ 94ನೇ ಹುಟ್ಟುಹಬ್ಬ ಅಂಗವಾಗಿ ಗ್ರಾಮದ ಗ್ರಾಮ ದೇವತೆ ಸಂತೆಕಾಳೇಶ್ವರಿ ಚಿಕ್ಕಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.ಶ್ರೀ ಸಂತೆಕಾಳೇಶ್ವರಿ ಚಿಕ್ಕಮ್ಮ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಎಚ್ ಡಿ ದೇವೇಗೌಡರಿಗೆ ಉತ್ತಮ ಆರೋಗ್ಯ ಯಶಸ್ಸು ಲಭಿಸಲಿ ಎಂದು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸಾರ್ವಜನಿಕರು ದೇವರಲ್ಲಿ ಪ್ರಾರ್ಥಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಬಿ ಎಚ್ ಶಿವಣ್ಣ ಮಾತನಾಡಿ ಹಾಸನ ಜಿಲ್ಲೆಯ ಹಾಗೂ ಕರ್ನಾಟಕದ ಏಕೈಕ ಮಣ್ಣಿನ ಮಗ ಈ ದೇಶದ ಕೆಂಪುಕೋಟೆಯ ಮೇಲೆ ಭಾರತದ ಧ್ವಜ ಹಾರಿಸುವ ಮೂಲಕ ಪ್ರಧಾನಿ ಹುದ್ದೆಗೇರಿದರು ಇದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ಪಡುವ ವಿಚಾರ. ಮುಂಬರುವ ದಿನಗಳಲ್ಲಿ ಎನ್ ಡಿ ಎ ಮೈತ್ರಿಕೂಟದ ವತಿಯಿಂದ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಹುಟ್ಟುಹಬ್ಬ ಪ್ರಯುಕ್ತ ಜೆಡಿಎಸ್ ಕಾರ್ಯಕರ್ತರು ಮುಖಂಡರು ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಎಚ್ ಡಿ ದೇವೇಗೌಡರ ಪರ ಜೈಕಾರ ಕೂಗಿದರು.ಈ ಸಂದರ್ಭದಲ್ಲಿ ಮುಖಂಡರಾದ ಓಬಳಾಪುರ ಬಸವರಾಜ್, ಬಾಗೂರು ಮನು, ಮಲ್ಲೇಶ್, ಎಲ್ಐಸಿ ಕಾಂತರಾಜ್, ಲಕ್ಷ್ಮಣ್, ಹರೀಶ್, ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂತ್ರಜ್ಞಾನ ಸರಿಯಾಗಿ ಬಳಸಿ ಕ್ರಿಯಾಶೀಲತೆ ಮೆರೆಯಿರಿ
.ಗ್ರಾಮ ಒನ್ ಸುಲಿಗೆ ಅಡ್ಡೆ ಮೇಲೆ ಅಧಿಕಾರಿಗಳ ದಾಳಿ