ಶರನ್ನವರಾತ್ರಿ ಪ್ರಯುಕ್ತ ವಿಶೇಷ ಪೂಜಾಮಹೋತ್ಸವ

KannadaprabhaNewsNetwork |  
Published : Oct 12, 2026, 01:45 AM IST
11ಎಚ್ಎಸ್ಎನ್16  :ಹೊಳೆನರಸೀಪುರದ ದೇವಾಂಗ ಬಡೆಆವಣೆಯ ಶ್ರೀ ಚೌಡೇಶ್ವರಿದೇವಿ ಹಾಗೂ ಶ್ರೀ ಬನಶಂಕರಿ ದೇವಾಲಯದಲ್ಲಿ ಮುಂಜಾನೆ ಪೂಜಾ ಕೈಂಕರ್ಯ ನಂತರ ಶ್ರೀ ದೇವಿಯ ಮೂರ್ತಿಗೆ ವಿಶೇಷವಾಗಿ ಹರಿದ್ರ(ಅರಿಶಿಣ) ಅಲಂಕಾರ ನೆರವೇರಿಸಿ, ಪೂಜಿಸಲಾಯಿತು. | Kannada Prabha

ಸಾರಾಂಶ

ಶರನ್ನವರಾತ್ರಿ ಮಹೋತ್ಸವ ಹಿನ್ನೆಲೆ ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖವಿದೆ. ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾರೆ ಎಂಬ ಪೂರ್ವಿಕರು ಹಾಗೂ ಆಚರಣೆ ಮಹತ್ವ ಪಡೆದಿದೆ ಜತೆಗೆ ನವರಾತ್ರಿಯ ೯ ದಿನಗಳ ಕಾಲ ಆದಿಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದ ದೇವಾಂಗ ಬಡಾವಣೆಯ ಶ್ರೀ ರಾಮಲಿಂಗ ಚೌಡೇಶ್ವರಿದೇವಿ ದೇವಾಲಯ ಹಾಗೂ ಶ್ರೀ ಬನಶಂಕರಿ ಅಮ್ಮನವರ ದೇವಾಲಯ ಮತ್ತು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪರಾಭವ ನಾಮ ಸಂವತ್ಸರದ ಶ್ರೀ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಭಾನುವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಪ್ರಾರಂಭವಾಯಿತು.

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಮುಂಜಾನೆ ಶ್ರೀ ಸ್ವಾಮಿಯ ಮೂರ್ತಿ ಹಾಗೂ ಶ್ರೀ ದುರ್ಗದೇವಿಯ ಮೂರ್ತಿಗೆ ಪಂಚಾಮೃತ ಅಭೀ?ಕ, ಅಲಂಕಾರ, ಪೂಜಾ ಕೈಂಕರ್ಯ ನೆರವೇರಿಸಿ ಮಹಾ ಮಂಗಳಾರತಿ ನಂತರ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಶ್ರೀ ಚೌಡೇಶ್ವರಿದೇವಿ ಹಾಗೂ ಶ್ರೀ ಬನಶಂಕರಿದೇವಿ ದೇವಾಲಯದಲ್ಲಿ ಮುಂಜಾನೆ ಶ್ರೀದೇವಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ಶ್ರೀ ದೇವಿಯ ಮೂರ್ತಿಗೆ ವಿಶೇಷವಾಗಿ ಹರಿದ್ರ (ಅರಿಶಿಣ) ಅಲಂಕಾರ, ಪೂಜಾ ಕೈಂಕರ್ಯ ನೆರವೇರಿಸಿ ಮಹಾ ಮಂಗಳಾರತಿ ನಂತರ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಶರನ್ನವರಾತ್ರಿ ಮಹೋತ್ಸವ ಹಿನ್ನೆಲೆ ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖವಿದೆ. ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾರೆ ಎಂಬ ಪೂರ್ವಿಕರು ಹಾಗೂ ಆಚರಣೆ ಮಹತ್ವ ಪಡೆದಿದೆ ಜತೆಗೆ ನವರಾತ್ರಿಯ ೯ ದಿನಗಳ ಕಾಲ ಆದಿಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಯಾನ್ಸಿರಾಂ ತತ್ವಾದರ್ಶಗಳ ಆದರ್ಶಗಳ ಪಾಲಿಸಿ: ಅಂದಾನಪ್ಪ
ಚಂದ್ರಶೇಖರ್ ನಿಸ್ವಾರ್ಥ ರಾಜಕಾರಣಿ,ಪಟೇಲರು ಶ್ರೇಷ್ಠರು: ಬಿಎಲ್‌ ಶಂಕರ್‌