ಮಾಡಾಳು ಸ್ವರ್ಣಗೌರಮ್ಮ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ವಿಶೇಷ ಪೂಜೆ

KannadaprabhaNewsNetwork |  
Published : Aug 15, 2026, 03:00 AM IST
ಮಾಡಾಳು ಸ್ವರ್ಣಗೌರಮ್ಮ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ವಿಶೇಷ ಪೂಜೆ | Kannada Prabha

ಸಾರಾಂಶ

ಹಾರನಹಳ್ಳಿ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರ ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ಪುನೀತರಾದರು. ಹಾರನಹಳ್ಳಿ ಕೋಡಿಮಠದ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಅಪ್ಪಣೆಯಂತೆ ಲೋಕಕಲ್ಯಾಣಾರ್ಥವಾಗಿ ಪ್ರತಿಯೊಂದು ಅಮಾವಾಸ್ಯೆಯಂದು ಜಗನ್ಮಾತೆ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರಲಾಗುತ್ತಿದ್ದು, ಅದರಂತೆ ಬುಧವಾರ ರಾತ್ರಿ ಚೇತನ್ ಮರಿದೇವರ ಪಾದಪೂಜೆಯನ್ನು ನೆರವೇರಿಸಲಾಯಿತು. ಕೋಡಿಮಠದ ಮಹಾತಪಸ್ವಿ ಶಿವಲಿಂಗಜ್ಜಯ್ಯಮೂರ್ತಿ ಗ್ರಾಮದ ಆರಾಧ್ಯ ದೈವ ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿ ಹಾಗೂ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೇರಿಸಿದರು.

ಅರಸೀಕೆರೆ: ಆಷಾಢ ಮಾಸದ ಕೊನೆಯ ಭೀಮನ ಅಮಾವಾಸ್ಯೆಯ ಅಂಗವಾಗಿ ತಾಲೂಕಿನ ಮಾಡಾಳು ಗ್ರಾಮದ ಐತಿಹಾಸಿಕ ಪುಣ್ಯಕ್ಷೇತ್ರ ಮೂಲಸ್ಥಾನ ಶ್ರೀ ಸ್ವರ್ಣಗೌರಮ್ಮ ದೇವಿ ದೇವಾಲಯದಲ್ಲಿ ವಿಶೇಷ ಧಾರ್ಮಿಕಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು.

ಹಾರನಹಳ್ಳಿ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರ ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ಪುನೀತರಾದರು. ಹಾರನಹಳ್ಳಿ ಕೋಡಿಮಠದ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಅಪ್ಪಣೆಯಂತೆ ಲೋಕಕಲ್ಯಾಣಾರ್ಥವಾಗಿ ಪ್ರತಿಯೊಂದು ಅಮಾವಾಸ್ಯೆಯಂದು ಜಗನ್ಮಾತೆ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರಲಾಗುತ್ತಿದ್ದು, ಅದರಂತೆ ಬುಧವಾರ ರಾತ್ರಿ ಚೇತನ್ ಮರಿದೇವರ ಪಾದಪೂಜೆಯನ್ನು ನೆರವೇರಿಸಲಾಯಿತು. ಕೋಡಿಮಠದ ಮಹಾತಪಸ್ವಿ ಶಿವಲಿಂಗಜ್ಜಯ್ಯಮೂರ್ತಿ ಗ್ರಾಮದ ಆರಾಧ್ಯ ದೈವ ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿ ಹಾಗೂ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೇರಿಸಿದರು.ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಶ್ರೀಮತಿ ನೀಲಮ್ಮ ಶಂಕರಪ್ಪ ಹಾಗೂ ಮಕ್ಕಳ ಬಳಗ ದುಮ್ಮೇನಹಳ್ಳಿ , ಷಡಕ್ಷರಪ್ಪ ಹಾಗೂ ಮಕ್ಕಳ ಬಳಗ ಹುಣಸೆಕಟ್ಟ ಅವರ ವತಿಯಿಂದ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಾಡಾಳು ಸೇರಿದಂತೆ ಸೀತಾಪುರಕೊಪ್ಪಲು, ಎರೇಹಳ್ಳಿ, ವೈಜಿಹಳ್ಳಿ, ಪಿ. ಹೊಸಳ್ಳಿ, ಕಿತ್ತನಕೆರೆ, ದೋಣನಕಟ್ಟೆ, ಬೊಮ್ಮಸಮುದ್ರ, ಕೆ. ಶಂಕರನಹಳ್ಳಿ, ಕಡಲೆಮಗ್ಗೆ, ಡಿ.ಎಂ. ಕುರ್ಕೆ, ಶಶಿವಾಳ, ಹಾರನಹಳ್ಳಿ ಹಾಗೂ ಅಣ್ಣನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮೀರ್ ಮೊಬೈಲಲ್ಲಿ ಭಾರತ ವಿರೋಧಿ ಮ್ಯಾಪ್‌!
ಗ್ರಾಪಂ ವ್ಯಾಪ್ತಿಗೆ ಒಳಪಡದ ಕೆಲಸ ವಹಿಸದಂತೆ ಸಿಬ್ಬಂದಿ ಮನವಿ