ಕನ್ನಡಪ್ರಭ ವಾರ್ತೆ ಮಳವಳ್ಳಿ
ದೇವಸ್ಥಾನದ ಬಳಿ ಸೇರಿದ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶಾಸಕರಿಗೆ ಸಚಿವ ಸ್ಥಾನ ಸಿಗಲಿ ಎಂದು ಶುಭ ಕೋರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದ ಸಂದರ್ಭದಲ್ಲಿ ಶಾಸಕರು ಪಕ್ಷ ಸಂಘಟಿಸಿ ಚುನಾವಣೆಯಲ್ಲಿ ಒಂದೊಂದರಂತೆ ಅಧಿಕಾರ ಹಿಡಿಯುವ ಮೂಲಕ ಬಲಿಷ್ಠಗೊಳಿಸಿದರು. ಜೊತೆಗೆ ಮೂರು ಭಾರಿ ಶಾಸಕರಾಗಿರುವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, 2013ರಿಂದಲ್ಲೂ ನರೇಂದ್ರಸ್ವಾಮಿ ಅವರಿಗೆ ಸಚಿವರಾಗುವ ಅರ್ಹತೆ ಇತ್ತು. ಜಿಲ್ಲೆಗೂ ಅದು ಅನಿವಾರ್ಯತೆ ಇದೆ. ಡಿ.ಕೆ.ಶಿವಕುಮಾರ್ ಅವರ ಮಂತ್ರಿ ಮಂಡಲದಲ್ಲಿ ಅವಕಾಶ ಸಿಗಬೇಕು. ನಮ್ಮ ಹರಕೆ ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ಈಡೇರುವ ನಂಬಿಕೆ ಇದೆ ಎಂದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಜಿಪಂ ಮಾಜಿ ಸದಸ್ಯೆ ಸುಷ್ಮಾ ರಾಜು, ಮುಖಂಡರಾದ ಡಿ.ಕೃಷ್ಣೇಗೌಡ, ಪುಟ್ಟಸ್ವಾಮಿ, ರಾಮಚಂದ್ರು, ದೊಡ್ಡಯ್ಯ, ಕುಳ್ಳಚನ್ನಂಕಯ್ಯ, ಮುಟ್ಟನಹಳ್ಳಿ ಅಂಬರೀಶ್, ಪಿ.ಮಾದೇಶ್, ಸಿ.ಮಾಧು ಚಂದ್ರು, ನೂರುಲ್ಲಾ, ದಿಲೀಪ್ ಕುಮಾರ್, ಸವಿತಾ, ಚಂದ್ರ ಕುಮಾರ್, ಪುಟ್ಟಸ್ವಾಮಿ, ಪೇಟೆಬೀದಿ ರವಿ, ಶಿವಕುಮಾರ್, ಕೃಷ್ಣ, ದೊಡ್ಡಸ್ವಾಮಿಗೌಡ, ನಾಗರಾಜು, ಎಂ.ಡಿ.ಸಂತೋಷ್ ಕುಮಾರ್, ಕಿರಣ್ ಶಂಕರ್ ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಶಾಸಕ ರಮೇಶ್ ಬಂಡಿಸಿದ್ದೇಗೌಡರು ಜಿಲ್ಲೆಯಲ್ಲಿ ಪ್ರಭಾವಿ ನಾಯಕರು. ಮೂರು ಬಾರಿ ಶಾಸಕರಾಗಿ ವಿದ್ಯುತ್ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿ ನಮ್ಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ಅವರ ತಾಯಿ ವಿಜಯಲಕ್ಷ್ಮಮ್ಮ 3 ಬಾರಿ ಶಾಸಕರಾಗಿ, ತಂದೆ ಬಂಡಿಸಿದ್ದೇಗೌಡ ಶಾಸಕರಾಗಿ, 1 ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದರು.ಹೀಗಾಗಿ ಶಾಸಕ ರಮೇಶ್ ಬಂಡಿಸಿದ್ದೇಗೌಡರು ಅವರಿಗೂ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಡಿಸಿಎಂ ಹಾಗೂ ಸಚಿವ ಸ್ಥಾನ ನೀಡದಿದ್ದರೆ ನಮ್ಮ ಸಮುದಾಯದ ಜನರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.