ಕಾರ್ತಿಕ ಹುಣ್ಣಿಮೆ ನಿಮಿತ್ತ ರೇಣುಕಾಂಬೆಗೆ ವಿಶೇಷ ಪೂಜೆ

KannadaprabhaNewsNetwork |  
Published : Nov 17, 2024, 01:18 AM IST
ಫೋಟೋ:೧೬ಕೆಪಿಸೊರಬ-೦೧ :  ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಪುರಾಣ ಹಾಗೂ ಐತಿಹಾಸಿಕ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು. | Kannada Prabha

ಸಾರಾಂಶ

ತಾಲೂಕಿನ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರ್ತಿಕ ಹುಣ್ಣಿಮೆ ನಿಮಿತ್ತ ಶುಕ್ರವಾರ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ತಾಲೂಕಿನ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರ್ತಿಕ ಹುಣ್ಣಿಮೆ ನಿಮಿತ್ತ ಶುಕ್ರವಾರ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಬ್ಯಾಡಗಿ, ರಾಣೆಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ , ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ಭಕ್ತರ ಆರಾಧ್ಯ ಶಕ್ತಿ ದೇವತೆ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ.. ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಭಕ್ತರು ಸ್ಥಳದಲ್ಲೇ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ದೇವಿಯ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಬಂಧು ಬಳಗದವರ ಜತೆ ಸಹ ಭೋಜನ ಮಾಡುವ ದೃಶ್ಯ ಕಂಡು ಬಂದಿತು.ಹುಣ್ಣಿಮೆ ನಿಮಿತ್ತ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ದೇವಸ್ಥಾನದಿಂದ ವಾದ್ಯ ಮೇಳಗಳೊಂದಿಗೆ ಆರಂಭವಾಗಿ ಸಮೀಪದ ಹೊಳೆಜೋಳದಗುಡ್ಡೆ ವರದಾ ನದಿ ತೀರದ ಶ್ರೀ ಗೋಮಂತೇಶ್ವರ ದೇವಸ್ಥಾನಕ್ಕೆ ತೆರಳಿತು. ಕಾರ್ತಿಕ ಹುಣ್ಣಿಮೆಯ ವಿವಿಧ ಧಾರ್ಮಿಕ ಪೂಜಾ ಸಾಂಪ್ರದಾಯಕ ವಿಧಿ ವಿಧಾನಗಳನ್ನು ಆಚರಿಸಲಾಯಿತು. ಪುನಃ ಜೋಳದಗುಡ್ಡೆ ಮಾರ್ಗವಾಗಿ ಚಂದ್ರಗುತ್ತಿ ಶ್ರೀ ದೇವಿಯ ಸನ್ನಿಧಿಯವರೆಗೆ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಪಲ್ಲಕ್ಕಿ ಉತ್ಸವಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ