ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಜಾಗೃತಿ ಜಾಥಾ

KannadaprabhaNewsNetwork |  
Published : Sep 22, 2026, 01:45 AM IST
21ಕೆಎಂಎನ್ ಡಿ11 | Kannada Prabha

ಸಾರಾಂಶ

ಅರ್ಹ ನಾಗರೀಕರ ಹೆಸರನ್ನು ಸೇರಿಸಲು ಮತ್ತು ದೋಷ ರೈತ ಮತದಾರ ಪಟ್ಟಿಯನ್ನು ಸಿದ್ಧಪಡಿಸಲು ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ತಮ್ಮ ಹೆಸರುಗಳನ್ನು ಪರಿಶೀಲನೆ ನಡೆಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿ ಕೊಳ್ಳುವಂತೆ ಮನವಿ.

ಕನ್ನಡಪ್ರಭ ವಾರ್ತೆ ಮದ್ದೂರು

ಮತದಾರರ ಪಟ್ಟಿ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ ಎಸ್ಐಆರ್ ಕುರಿತು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಅಭಿಯಾನ ಜಾಗೃತಿ ಜಾಥಾಗೆ ಶುಕ್ರವಾರ ಸಂಜೆ ಚಾಲನೆ ನೀಡಲಾಯಿತು.

ನಗರದ ಕೊಲ್ಲಿ ವೃತ್ತದಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ ಬಿರಾದಾರ ಮತ್ತು ನಗರಸಭೆ ಆಯುಕ್ತೆ ರಾಧಿಕಾ ಸೋಮಶೇಖರ್ ಜಂಟಿ ಚಾಲನೆ ನೀಡಿದರು.

ಈ ವೇಳೆ ಡಾ.ಶಿವಕುಮಾರ್ ಬಿರಾದಾರ ಮಾತನಾಡಿ, ಅರ್ಹ ನಾಗರೀಕರ ಹೆಸರನ್ನು ಸೇರಿಸಲು ಮತ್ತು ದೋಷ ರೈತ ಮತದಾರ ಪಟ್ಟಿಯನ್ನು ಸಿದ್ಧಪಡಿಸಲು ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ತಮ್ಮ ಹೆಸರುಗಳನ್ನು ಪರಿಶೀಲನೆ ನಡೆಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿ ಕೊಳ್ಳುವಂತೆ ಮನವಿ ಮಾಡಿದರು.

ಪೌರಾಯುಕ್ತೆ ರಾಧಿಕಾ ಸೋಮಶೇಖರ್ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದೆ. ಅದರ ಭಾಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಉದ್ದೇಶದಿಂದ ಜಾಥಾ ಮೂಲಕ ವಿಶೇಷ ಅಭಿಯಾನ ನಡೆಸಲಾಗುತ್ತಿದೆ ಎಂದರು.

ನಂತರ ಕೊಲ್ಲಿ ವೃತ್ತದಿಂದ ಪೇಟೆ ಬೀದಿ ಮೂಲಕ ಪ್ರವಾಸಿ ಮಂದಿರ ವೃತ್ತದ ವರೆಗೆ ವಿವಿಧ ಇಲಾಖೆ ಅಧಿಕಾರಿಗಳು, ನಗರಸಭೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಮೇಣದ ಬತ್ತಿಗಳನ್ನು ಹಿಡಿದು ಮೆರವಣಿಗೆ ನಡೆಸುವ ಮೂಲಕ ಎಸ್ ಐ ಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ವೇಳೆ ತಾಪಂ ಇಒ ರಾಮಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ಕೃಷಿ ಇಲಾಖೆ ಅಧಿಕಾರಿ ಎಸ್.ದಯಾನಂದ, ನಗರಸಭೆ ವ್ಯವಸ್ಥಾಪಕ ಶ್ರೀಧರ್, ಕಂದಾಯ ಇಲಾಖೆ ಅಧಿಕಾರಿಗಳು, ನೂರಾರು ಪೌರಕಾರ್ಮಿಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಬಸ್ ಗ್ಯಾರಂಟಿ ಇಲ್ಲ.. ಖಾಸಗಿ ಬಸ್‌ಗೆ ಕಾಸಿಲ್ಲ!
ಇಂದು ಗಣೇಶ ವಿಸರ್ಜನೆ: ಬಿಗಿ ಬಂದೋಬಸ್ತ್‌