ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Mar 06, 2024, 02:20 AM IST
ಫೋಟೊ: ಎಚ್‌ಎನ್‌ಎಲ್೪ | Kannada Prabha

ಸಾರಾಂಶ

ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಒಟ್ಟು ₹೬.೨೪ ಕೋಟಿ ವೆಚ್ಚದ ರಸ್ತೆ, ಚರಂಡಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಕನ್ನಡಪ್ರಭ ವಾರ್ತೆ ಹಾನಗಲ್ಲ

ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ೪ ರ ಅಡಿ ಒಟ್ಟು ₹೬.೨೪ ಕೋಟಿ ವೆಚ್ಚದಲ್ಲಿ ಆರ್‌ಸಿಸಿ ಚರಂಡಿ ಹಾಗೂ ಡಾಂಬರ್ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ತಾರಕೇಶ್ವರ ದೇವಸ್ಥಾನದ ಎದುರು ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಪುರಸಭೆ ವ್ಯಾಪ್ತಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಕಾಳಜಿ ವಹಿಸಲಾಗಿದೆ. ಈಗಾಗಲೇ ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರೋತ್ಥಾನದಡಿ ನಾನಾ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನದ ಹಂತದಲ್ಲಿವೆ. ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೂ ಅನುದಾನ ದೊರಕಿದೆ. ವಸತಿ ರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಒಟ್ಟಾರೆ ನಗರದ ಸರ್ವತೋಮುಖ ಪ್ರಗತಿಗೆ ಕಾಳಜಿ ವಹಿಸಲಾಗಿದೆ ಎಂದ ಶಾಸಕ ಮಾನೆ ಅವರು, ನಗರೋತ್ಥಾನ ೪ ರ ಅಡಿಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದ ಹೊತ್ತಿಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾನೆ ವಿವರಿಸಿದರು.

ಪುರಸಭೆ ಮಾಜಿ ಅಧ್ಯಕ್ಷರಾದ ಸರ್ವರಭಾಷಾ ಪೀರಜಾದೆ, ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಸದಸ್ಯರಾದ ವಿರುಪಾಕ್ಷಪ್ಪ ಕಡಬಗೇರಿ, ಪ್ರಸಾದಗೌಡ, ಮಮತಾ ಆರೆಗೊಪ್ಪ, ಶೋಭಾ ಉಗ್ರಣ್ಣನವರ, ಗುರುರಾಜ ನಿಂಗೋಜಿ, ರಾಜೂ ಗುಡಿ, ಜಿಲ್ಲಾ ನಗರ ಪ್ರಾಧಿಕಾರದ ಎಇಇ ಸುಭಾಸ್ ಕಂಬಳಿ ಹಾಗೂ ಮುಖ್ಯಾಧಿಕಾರಿ ವೈ.ಕೆ. ಜಗದೀಶ, ಅಭಿಯಂತರ ನಾಗರಾಜ ಮಿರ್ಜಿ, ವಿನಯ ಬಂಕನಾಳ, ಇರ್ಫಾನ್ ಮಿಠಾಯಿಗಾರ, ತಮ್ಮಣ್ಣ ಆರೆಗೊಪ್ಪ ಮೊದಲಾದವರು ಈ ಸಂದರ್ಭದಲ್ಲಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ