ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ ನೀಡಿ

KannadaprabhaNewsNetwork |  
Published : Jun 02, 2026, 01:15 AM IST
೫೨ | Kannada Prabha

ಸಾರಾಂಶ

ಧ್ರುವನಾರಾಯಣ್ ಅವರು ಕಾರ್ಯಧ್ಯಕ್ಷರಾಗಿ 9 ಜಿಲ್ಲೆಗಳ ಹೊಣೆಯನ್ನು ಹೊತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಪರಿಣಾಮ 9 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ,

ಕನ್ನಡಪ್ರಭ ವಾರ್ತೆ ನಂಜನಗೂಡುಕಾಂಗ್ರೆಸ್ ಕ್ಕಾಗಿ ಧ್ರುವನಾರಾಯಣ್ ಅವರು ಮಾಡಿರುವ ತ್ಯಾಗ ಹೋರಾಟದ ಕೊಡುಗೆಯನ್ನು ಪರಿಗಣಿಸಿ ಕಾಂಗ್ರೆಸ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹೇಳಿದರು.ಧ್ರುವನಾರಾಯಣ್ ಅವರು ಕಾರ್ಯಧ್ಯಕ್ಷರಾಗಿ 9 ಜಿಲ್ಲೆಗಳ ಹೊಣೆಯನ್ನು ಹೊತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಪರಿಣಾಮ 9 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ, ಅವರ ಸೇವೆಯನ್ನು ಪರಿಗಣಿಸಿ ಅವರ ಸುಪುತ್ರರಾಗಿರುವ ದರ್ಶನ್ ಧ್ರುವನಾರಾಯಣ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.ಇದಕ್ಕೂ ಮುನ್ನ ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಂಜನಗೂಡು ಮೂರು ಬ್ಲಾಕ್ ನ ಕಾಂಗ್ರೆಸ್ ಕಾರ್ಯಕರ್ತರು ದರ್ಶನ್ ಧ್ರುವನಾರಾಯಣ್ ರವರಿಗೆ ಮಂತ್ರಿ ಸ್ಥಾನ ದೊರಕುವಂತೆ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಮಾಡಿಕೊಂಡರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ, ನಗರ ಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಮುಖಂಡರಾದ ರಂಗದಾಸ್, ದೊರೆಸ್ವಾಮಿನಾಯಕ, ಅಬ್ದುಲ್ ಖಾದರ್, ಕರಳಾಪುರ ನಾಗರಾಜು, ಸೋಮು, ಶ್ರೀನಿವಾಸ ಮೂರ್ತಿ, ಎನ್.ಎಂ. ಮಂಜುನಾಥ್, ರಾಜೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಮಹೇಶ್, ಮಹೇಂದ್ರ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್ ಮೋಹಕ್ಕೆ ಒಳಗಾದವರಿಗೆ ಭವಿಷ್ಯವಿಲ್ಲ: ಡಾ.ಶಂಕರ್
ಶಾಲೆ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ