ಲಕ್ಷ್ಮೀ ನರಸಿಂಹಸ್ವಾಮಿಯ ಮೂಲ ಮೂರ್ತಿಗೆ ವಿಶೇಷ ಪೂಜೆ

KannadaprabhaNewsNetwork |  
Published : Nov 22, 2026, 01:30 AM IST
21ಎಚ್ಎಸ್ಎನ್10 : ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ತುಳಸಿ ಹಬ್ಬದ ವಿಶೇಷ ಪ್ರಯುಕ್ತ ಅಭಿಷೇಕ ಹಾಗೂ ರಥಬೀದಿ ಉತ್ಸವ ವೈಭವದಿಂದ ನಡೆಯಿತು. | Kannada Prabha

ಸಾರಾಂಶ

ಉತ್ಥಾನ ದ್ವಾದಶಿ ಪ್ರಯುಕ್ತ ಶನಿವಾರ ಮುಂಜಾನೆ ಬ್ರಾಹ್ಮಿ ಮಹೂರ್ತದ ರೇವತಿ ನಕ್ಷತ್ರದಲ್ಲಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿಯ ಮೂಲ ಮೂರ್ತಿಗೆ ಪುಣ್ಯಾಹ, ಪಂಚಾಮೃತ ಅಭಿಷೇಕ ನೆರೆವೇರಿಸಿ ವಿಶೇಷವಾಗಿ ಅಲಂಕರಿಸಲಾಯಿತು. ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿಟ್ಟು, ವಿಶೇಷವಾಗಿ ಅಲಂಕರಿಸಿ, ಪೂಜಿಸಿದ ನಂತರ, ರಥಬೀದಿಯಲ್ಲಿ ಉತ್ಸವ ಹಾಗೂ ಪ್ರಾಕಾರೋತ್ಸವ ನಡೆಸಿದ ನಂತರ ತಧಿ ಆರಾಧನೆ ಸೇವೆ, ನೈವೇಧ್ಯ, ಸಹಸ್ರ ನಾಮಾರ್ಚನೆ, ಅರ್ಚನೆ, ಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್ ಭಟ್ಟರು ಹಾಗೂ ವಿಜಯಕುಮಾರ್ ಪೂಜಾ ಕೈಂಕರ್ಯ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರಪಟ್ಟಣದ ಐತಿಹಾಸಿಕ ಹಿನ್ನಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ತುಳಸಿ ಹಬ್ಬ(ಉತ್ಥಾನ ದ್ವಾದಶಿ) ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಉತ್ಥಾನ ದ್ವಾದಶಿ ಪ್ರಯುಕ್ತ ಶನಿವಾರ ಮುಂಜಾನೆ ಬ್ರಾಹ್ಮಿ ಮಹೂರ್ತದ ರೇವತಿ ನಕ್ಷತ್ರದಲ್ಲಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿಯ ಮೂಲ ಮೂರ್ತಿಗೆ ಪುಣ್ಯಾಹ, ಪಂಚಾಮೃತ ಅಭಿಷೇಕ ನೆರೆವೇರಿಸಿ ವಿಶೇಷವಾಗಿ ಅಲಂಕರಿಸಲಾಯಿತು. ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿಟ್ಟು, ವಿಶೇಷವಾಗಿ ಅಲಂಕರಿಸಿ, ಪೂಜಿಸಿದ ನಂತರ, ರಥಬೀದಿಯಲ್ಲಿ ಉತ್ಸವ ಹಾಗೂ ಪ್ರಾಕಾರೋತ್ಸವ ನಡೆಸಿದ ನಂತರ ತಧಿ ಆರಾಧನೆ ಸೇವೆ, ನೈವೇಧ್ಯ, ಸಹಸ್ರ ನಾಮಾರ್ಚನೆ, ಅರ್ಚನೆ, ಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್ ಭಟ್ಟರು ಹಾಗೂ ವಿಜಯಕುಮಾರ್ ಪೂಜಾ ಕೈಂಕರ್ಯ ನೆರವೇರಿಸಿದರು. ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ನವೆಂಬರ್ ೨೪ರ ಮಂಗಳವಾರ ಕಾರ್ತಿಕ ಮಾಸದ ಹುಣ್ಣಿಮೆಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಹಾಗೂ ಭಕ್ತಾದಿಗಳ ಮನಃ ಸಂಕಲ್ಪ ಸಿದ್ಧಿಗಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬುಧವಾರ ಮುಂಜಾನೆ ಶ್ರೀ ಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿ?ಕ, ೧೦.೩೦ ಗಂಟೆಗೆ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಜಲಿ ಕೊಲೆ ಪ್ರಕರಣ: ಗಿರೀಶ್ ಅಪರಾಧಿ; 25ಕ್ಕೆ ಶಿಕ್ಷೆ ಪ್ರಕಟ
ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಜೀವನ ನಡೆಸಿ