ಕನ್ನಡಪ್ರಭ ವಾರ್ತೆ ಮಡಿಕೇರಿ
ಟಿಂಪು ಜಯಂತಿ ವಿರೋಧಿಸಿ 2015ರಲ್ಲಿ ನಡೆದ ಹೋರಾಟದಲ್ಲಿ ಕುಟ್ಟಪ್ಪ ಮೃತಪಟ್ಟಿದ್ದ ಹಿನ್ನೆಲೆ ನಗರದ ಓಂಕಾರೇಶ್ವರ ದೇವಾಲಯದಲ್ಲಿ ಶುಕ್ರವಾರ ಕುಟ್ಟಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲಾಯಿತು.ಹಿಂದೂ ಜಾಗರಣ ವೇದಿಕೆ. ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕುಟ್ಟಪ್ಪ ಹೆಸರಿನಲ್ಲಿ ಶಾಂತಿ ಪೂಜೆ ನೆರವೇರಿಸಿದರು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಪೊಲೀಸ್ ಇಲಾಖೆಯಿಂದ ಹೆಚ್ಚಿನ ನಿಗಾ ವಹಿಸಲಾಗಿತ್ತು.