ಮೋದಿ ಹೆಸರಿನಲ್ಲಿ ಆಂಜನೇಯನಿಗೆ ವಿಶೇಷ ಪೂಜೆ

KannadaprabhaNewsNetwork |  
Published : Jun 11, 2026, 12:15 AM IST
8888 | Kannada Prabha

ಸಾರಾಂಶ

ಅತಿ ಹೆಚ್ಚು ಅವಧಿಯಲ್ಲಿ ದೇಶದ ಪ್ರಧಾನ ಮಂತ್ರಿಯಾಗಿ ಆಡಳಿತ ನಡೆಸಿದ ನರೇಂದ್ರ ಮೋದಿಯವರನ್ನು ಅಭಿನಂದಿಸಿ, ಅವರಿಗೆ ಆಯುಷ್ಯ, ಆರೋಗ್ಯ, ಮತ್ತಷ್ಟು ಸೇವೆ ಮಾಡುವ ಶಕ್ತಿ ದೊರೆಯಲೆಂದು ಪ್ರಾರ್ಥಿಸಿ ಜಿಲ್ಲಾ ಬಿಜೆಪಿಯಿಂದ ಬುಧವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ, ತುಮಕೂರುಅತಿ ಹೆಚ್ಚು ಅವಧಿಯಲ್ಲಿ ದೇಶದ ಪ್ರಧಾನ ಮಂತ್ರಿಯಾಗಿ ಆಡಳಿತ ನಡೆಸಿದ ನರೇಂದ್ರ ಮೋದಿಯವರನ್ನು ಅಭಿನಂದಿಸಿ, ಅವರಿಗೆ ಆಯುಷ್ಯ, ಆರೋಗ್ಯ, ಮತ್ತಷ್ಟು ಸೇವೆ ಮಾಡುವ ಶಕ್ತಿ ದೊರೆಯಲೆಂದು ಪ್ರಾರ್ಥಿಸಿ ಜಿಲ್ಲಾ ಬಿಜೆಪಿಯಿಂದ ಬುಧವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.ಪೂಜೆ ಸಲ್ಲಿಸಿ ಸಿಹಿ ವಿತರಣೆ ಮಾಡಿ ಸಂಭ್ರಮಾಚರಣೆ ನಂತರ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷ ಕಾಲ ಆಡಳಿತ ನಡೆಸಿ ಅತಿ ಹೆಚ್ಚು ಅವಧಿಯ ಆಡಳಿತದ ದಾಖಲೆ ಮಾಡಿದ್ದಾರೆ. ದೂರದೃಷ್ಟಿ ಚಿಂತನೆಯ ಮೋದಿಯವರು ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದವರಿಗೂ ನೆರವಾಗಿ ದೇಶದ ಅಭಿವೃದ್ಧಿಗೆ ಕಾರಣರಾಗಿದ್ದರೆ. ಮೋದಿಯವರ ಆಡಳಿತಾವಧಿ ಭಾರತದ ಪಾಲಿಗೆ ಸುವರ್ಣಯುಗ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಜಗತ್ತೇ ಭಾರತದತ್ತ ತಿರುಗಿ ನೋಡುವಂತಹ ಆಡಳಿತ ನೀಡಿದ ವಿಶ್ವನಾಯಕ ನರೇಂದ್ರ ಮೋದಿಯವರು ಪ್ರಧಾನಿಯಾಗಿ 4399 ದಿನಗಳ ಸುದೀರ್ಘ ಕಾಲ ಆಡಳಿತ ನಡೆಸಿ ದಾಖಲೆ ಮಾಡಿದ್ದಾರೆ. ಬಡವರು, ದೀನದಲಿತರು, ಮಹಿಳೆಯರು, ರೈತರ ಪರವಾದ ಅನೇಕ ಯೋಜನೆಗಳನ್ನು ತಂದು ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದರು. ಬಲಿಷ್ಠ, ಸಂಪತ್ಭರಿತ ರಾಷ್ಟ್ರ ನಿರ್ಮಾಣ ಮಾಡಿರುವ ಪ್ರಧಾನಿ ಮೋದಿವರಿಗೆ ಆಯುಷು, ಆರೋಗ್ಯ ಕೊಡಲಿ, ಅವರು ಮತ್ತಷ್ಟು ಸೇವೆ ಮಾಡುವ ಶಕ್ತಿ ನೀಡಲಿ ಎಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಎಸ್.ಪಿ. ಚಿದಾನಂದ್, ನಗರ ಅಧ್ಯಕ್ಷ ಧನುಷ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಚೈತ್ರ ಮಂಜುನಾಥ್, ಸಿ.ಎನ್. ರಮೇಶ್, ವಿಷ್ಣುವರ್ಧನ್, ಮಲ್ಲಿಕಾರ್ಜುನ್, ಇಂದ್ರಕುಮಾರ್, ಮಂಜುನಾಥ್, ಜಿಲ್ಲಾ ವಕ್ತಾರ ಜೆ. ಜಗದೀಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಮಂಗಲ ಜಗದೀಶ್, ಮುಖಂಡರಾದ ಭೈರಣ್ಣ, ಕೆ. ವೇದಮೂರ್ತಿ, ಗಣೇಶ್‌ಪ್ರಸಾದ್, ವಿರೂಪಾಕ್ಷಪ್ಪ, ಊರುಕೆರೆ ವಿಜಯಕುಮಾರ್, ವಸಂತ, ರೇಖಾ ಶಿವಕುಮಾರ್, ಮಂಜುಳಾ ಲೋಕೇಶ್, ಹನುಮಂತರಾಜು, ಬನಶಂಕರಿಬಾಬು, ಬಂಬೂ ಮೋಹನ್, ಪ್ರೀತಂ ಜೈನ್, ಪ್ರತಾಪ್, ರವಿ ಚೆಂಗಾವರ, ಕೆ.ಎಂ. ಶಿವಕುಮಾರ್, ಗಂಗೇಶ್ ಹದ್ದಿನಕಲ್ಲು, ಮರಿತಿಮ್ಮಯ್ಯ, ವೆಂಕಟೇಶಾಚಾರ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ
ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡಿ