ಕನ್ನಡಪ್ರಭ ವಾರ್ತೆ ಹಾಸನ
ಬೆಳಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ೮ ಗಂಟೆಗೆ ಮಹಾಮಂಗಳಾರತಿ, ೯ಕ್ಕೆ ಮಾರುತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿಯಾದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ೧೨:೩೦ಕ್ಕೆ ಸಾವಿರಾರು ಜನರಿಗೆ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸಂಜೆ ೭: ೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ವಿಜೃಂಭಣೆಯಿಂದ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.
ಇದೇ ವೇಳೆ ದೇವಾಲಯದ ಅರ್ಚಕರಾದ ರಕ್ಷಿತ್ ಭಾರಧ್ವಾಜ್ ಮಾರುತಿ ಜಯಂತಿ ಬಗ್ಗೆ ಮಾಹಿತಿ ನೀಡಿ, ಡಿಪೋ ಇರುವ ಶ್ರೀ ಆಂಜನೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹನುಮ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇವತ್ತು ರಾಮನಾಮವನ್ನು ಜಪ ಮಾಡುತ್ತಿರುವ ಮಾರುತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದಲ್ಲಿ ಅಲಂಕಾರಕ್ಕೂ ಬಹಳ ಪ್ರಾಮುಖ್ಯತೆ ಕೊಡಲಾಗುತ್ತದೆ ಎಂದರು.ಸಾವಿರಾರು ಜನರಿಗೆ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಮಾಡಲಾಗಿದ್ದು, ಭಗವಂತನು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.
ನಗರದ ದೇವಿಗೆರೆ ಬಳಿ ಇರುವ ಶ್ರೀ ನೀರು ಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.