ಕನ್ನಡಪ್ರಭ ವಾರ್ತೆ ಆಲೂರು
ಸೋಮವಾರ ಸಂಜೆಯಿಂದ ಪೂಜಾ ವಿಧಿವಿಧಾನಗಳು ಪ್ರಾರಂಭವಾದವು. ಮಂಗಳವಾರ ಬೆಳಗ್ಗೆ ೭ ಗಂಟೆಗೆ ಫಲ ಪಂಚಾಮೃತ ಅಭಿಷೇಕ ಮತ್ತು ರಜತ ಕವಚ ಹಾಗೂ ಪುಷ್ಪಾಲಂಕಾರ ಮಾಡಲಾಯಿತು. ೧೧ ಗಂಟೆಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮಿ ದರ್ಶನ ಪಡೆದರು.ಶಾಸಕರಾದ ಸಿಮೆಂಟ್ ಮಂಜು, ಹಾಸನ ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕದೆ ಎಚ್. ಕೆ. ಕುಮಾರಸ್ವಾಮಿ, ಚಂಚಲ ಕುಮಾರಸ್ವಾಮಿ ಮತ್ತು ಸ್ಥಳೀಯ ಜನಪ್ರತಿನಿದಿಗಳು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಡೊಳ್ಳು ಕುಣಿತ, ಪೂಜಾ ಕುಣಿತ, ಕೀಲುಕುದುರೆ, ಗುರುವಾಯನಕೆರೆ ಮಹಿಳೆಯರಿಂದ ಚಂಡೆವಾದ್ಯ, ನಾಗಸ್ವರ ವಾದ್ಯದೊಂದಿಗೆ ಶ್ರೀಯವರನ್ನು ಬೆಳ್ಳಿರಥದಲ್ಲಿ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಸಂಜೆ ದೇವಸ್ಥಾನದ ಆವರಣದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.