ಪ್ರಧಾನಿ ಮೋದಿ ಹುಟ್ಟುಹಬ್ಬದಂಗವಾಗಿ ಪೆಂಡಾಲ್‌ ಗಣಪನಿಗೆ ವಿಶೇಷ ಪೂಜೆ

KannadaprabhaNewsNetwork |  
Published : Sep 18, 2025, 01:10 AM IST
17ಎಚ್ಎಸ್ಎನ್18 :  | Kannada Prabha

ಸಾರಾಂಶ

ಮೋದಿ ಹುಟ್ಟುಹಬ್ಬ ಪೆಂಡಾಲ್ ಗಣಪನಿಗೆ ವಿಶೇಷ ಪೂಜೆ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳಿಂದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸೇರಿ ವಿಘ್ನ ನಿವಾರಕನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಸಿಟಿ ಬಸ್ ನಿಲ್ದಾಣ ರಸ್ತೆಯ ಗಣಪತಿ ಪೆಂಡಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ವೇಳೆ ಭಕ್ತಾದಿಗಳಿಗೆ ಗಣ್ಯರಿಂದ ಪ್ರಸಾದವನ್ನು ವಿತರಿಸಲಾಯಿತು. ನಂತರ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಮಾತನಾಡಿ, ಪ್ರತಿ ವರ್ಷ ಪೆಂಡಾಲ್ ಗಣಪತಿಗೆ ನಮ್ಮ ಕುಟುಂಬದಿಂದ ವಿಶೇಷ ಪೂಜೆಯನ್ನು ನೇರವೇರಿಸಲಾಗುತ್ತದೆ. ಇಂದು ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ೭೫ನೇ ಹುಟ್ಟುಹಬ್ಬ ಪ್ರಯುಕ್ತ ಪ್ರಧಾನಿ ಅವರ ಆರೋಗ್ಯ ಮತ್ತು ಆಯಾಸ್ಸನ್ನು ಹೆಚ್ಚಿಗೆ ನೀಡಿ ದೇಶವನ್ನು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ. ಪ್ರಧಾನಿ ಹುಟ್ಟುಹಬ್ಬವನ್ನು ಇಡೀ ದೇಶವು ಹಬ್ಬದ ರೀತಿ ಜೊತೆಗೆ ಅನೇಕ ಸೇವಾ ಚಟುವಟಿಕೆ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಮೋದಿ ಹುಟ್ಟುಹಬ್ಬ ಪೆಂಡಾಲ್ ಗಣಪನಿಗೆ ವಿಶೇಷ ಪೂಜೆ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳಿಂದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸೇರಿ ವಿಘ್ನ ನಿವಾರಕನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.ಕೆಲ ದಿನಗಳ ಹಿಂದೆ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತ ಆಚಾತುರ್ಯದ ಘಟನೆಯಾಗಿದ್ದು, ಯುವಕರು ಸಾವಿಗೀಡಾದರು. ಎಂಜಿನಿಯರ್ ಪದವಿ ಪಡೆದು ಕುಟುಂಬ ನಿರ್ವಹಣೆಯ ಕನಸು ಕಂಡಿದ್ದವರ ದುರಂತ ಸಾವಾಗಿದ್ದು ನೋವು ತಂದಿದೆ. ಈ ಘಟನೆ ನಡೆಯಬಾರದಿತ್ತು. ಆದರೇ ನಡೆದು ಹೋಗಿದೆ. ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ಕೊಡಲಿ ಎಂದು ಹೇಳಿದರು. ಪ್ರಹ್ಲಾದ್ ಜೋಶಿ ಅವರಿಗೆ ಪರಿಹಾರದ ಬಗ್ಗೆ ಮನವಿ ಮಾಡಲಾಗಿತ್ತು. ಪ್ರಧಾನ ಮಂತ್ರಿಗಳು ಈಗಾಗಲೇ ಪರಿಹಾರವನ್ನು ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಗಮನ ಕೊಡಲಾಗುವುದು ಎಂದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ