ಅನುದಾನ ಆಧರಿಸಿ ತಾಲೂಕು ಕ್ರೀಡಾಂಗಣಕ್ಕೆ ಪ್ರೇಕ್ಷಕರ ಗ್ಯಾಲರಿ

KannadaprabhaNewsNetwork |  
Published : Apr 07, 2026, 01:45 AM IST
6ಎಚ್ಎಸ್ಎನ್7 :  | Kannada Prabha

ಸಾರಾಂಶ

ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ೧ ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ವಾಲಿಬಾಲ್, ಕಬಡ್ಡಿ, ಖೋ-ಖೋ, ಎತ್ತರ ಜಿಗಿತ, ಉದ್ದ ಜಿಗಿತ ಅಂಕಣ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಪ್ ನಿರ್ಮಾಣ ಹಾಗು ಒಳ ಚರಂಡಿ ಕೈಗೊಳ್ಳಲಾಗುವುದು. ವ್ಯವಸ್ಥೆ ಕ್ರೀಡಾಂಗಣ ಸುತ್ತಲು ಚೈನ್ ಲಿಂಕ್ ಪೆನ್ನಿಂಗ್ ವ್ಯವಸ್ಥೆ ಮಾಡಿ ಕ್ರೀಡಾಭಿ ಮಾನಿಗಳಿಗೆ ನಿರಾಸೆ ಮೂಡದ ಹಾಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನದ ಲಭ್ಯತೆ ಆಧರಿಸಿ ತಾಲೂಕು ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಮಾಡಲಾಗುವುದೆಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸ್ಥಳೀಯ ಕ್ರೀಡಾಪಟುಗಳಿಗೆ ವೇದಿಕೆ ಸೃಷ್ಟಿಸುವುದು ನಮ್ಮ ಜವಾಬ್ದಾರಿ, ಪೆವಿಲಿಯನ್, ಕೊಠಡಿ ಹಾಗು ಪ್ರತ್ಯೇಕ ಶೌಚಾಲಯ ಸೇರಿ ಕ್ರೀಡಾಂಗಣಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ೧ ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ವಾಲಿಬಾಲ್, ಕಬಡ್ಡಿ, ಖೋ-ಖೋ, ಎತ್ತರ ಜಿಗಿತ, ಉದ್ದ ಜಿಗಿತ ಅಂಕಣ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಪ್ ನಿರ್ಮಾಣ ಹಾಗು ಒಳ ಚರಂಡಿ ಕೈಗೊಳ್ಳಲಾಗುವುದು. ವ್ಯವಸ್ಥೆ ಕ್ರೀಡಾಂಗಣ ಸುತ್ತಲು ಚೈನ್ ಲಿಂಕ್ ಪೆನ್ನಿಂಗ್ ವ್ಯವಸ್ಥೆ ಮಾಡಿ ಕ್ರೀಡಾಭಿ ಮಾನಿಗಳಿಗೆ ನಿರಾಸೆ ಮೂಡದ ಹಾಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕ ಡಾ.ಆನಂದಮೂರ್ತಿ, ಪುರಸಭಾ ಮುಖ್ಯಾಧಿಕಾರಿ ಆರ್‌. ಯತೀಶ್‌ ಕುಮಾರ್‌, ಮಾಜಿ ಅಧ್ಯಕ್ಷ ಕೋಟೆ ಮೋಹನ್, ರಾಮು, ಮುಖಂಡರಾದ ಪುರಿ ಮಂಜಪ್ಪ, ಒಳಗೇರಹಳ್ಳಿ ಮಂಜುನಾಥ್, ಎಂ. ಶಿವರ ಮಾಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್‌ ಪುನೀತ್ ಮಾದಗುಡ್ಡನಹಳ್ಳಿ, ಕಾಂಗ್ರೆಸ್ ಮುಖಂಡ ಮಖಾನ್ ವಿನೋದ್, ಕ್ರೀಡಾಂಗಣ ನಿರ್ವಾಹಕ ಸೂರ್ಯ ಕುಮಾರ್‌ ಹಾಗೂ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಜಿ ಶಾಸಕ ಸುರೇಶ್‌ಗೌಡರಿಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಬೊಮ್ಮೇನಹಳ್ಳಿ ಸುತ್ತಮುತ್ತ ಬೀಡುಬಿಟ್ಟ ಕಾಡಾನೆ ಹಿಂಡು