ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ ಅಗತ್ಯ: ಡೀಸಿ

KannadaprabhaNewsNetwork |  
Published : Jun 27, 2026, 02:00 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಲು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

9 ದೌರ್ಜನ್ಯ ಪ್ರಕರಣ ದಾಖಲು:

ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಇಲ್ಲಿಯವರೆಗೂ ಒಟ್ಟು 9 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 09 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು 2.50 ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಅನುದಾನ ಅರ್ಹರಿಗೆ ತಲುಪಿಸಿ:

ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು. ಸುಳ್ಳು ದೌರ್ಜನ್ಯ ಪ್ರಕರಣ ದಾಖಲಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ನಾಲ್ಕು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಆಸ್ಪತ್ರೆ ಬಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ ಅವರು, ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ಪಾವತಿಸಬೇಕು. ಕಸ ವಿಂಗಡಣೆ ಮಾಡಲು ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿನಿಲಯ ಹಾಗೂ ಹಾಸ್ಟೆಲ್ ಗಳಲ್ಲಿ 15 ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ವಾಸ್ತವ್ಯ ಇದ್ದು, ಅಲ್ಲಿನ ಸ್ಥಿತಿಗತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ವರದಿ ನೀಡಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ವಾಸಂತಿ ಅಮರ್‌, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಂದ್ರಕಾಂತ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಮುಖ್ಯಯೋಜನಾಧಿಕಾರಿ ರಾಮಕೃಷ್ಣಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಫೋಟೋ-

25ಕೆಡಿಬಿಪಿ6- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪನಿರ್ದೇಶಕ ಶಿವಕುಮಾರ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಪುಂಡರ ಹಲ್ಲೆ ಆರೋಪ