ನೊಂದ, ಬೆಂದ ಮನಗಳಿಗೆ ಆಧ್ಯಾತ್ಮಿಕ ಜ್ಞಾನ ಅತ್ಯವಶ್ಯಕ: ರಂಭಾಪುರಿ ಶ್ರೀ

KannadaprabhaNewsNetwork |  
Published : Feb 28, 2026, 01:30 AM IST
೨೭ಬಿಹೆಚ್‌ಆರ್ ೫: ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಕಾರ್ಯಕ್ರಮಗಳಿಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಧರ್ಮ ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು. ವಿವಿಧ ಮಠಾಧೀಶರು ಗಣ್ಯರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರುಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ ಬಟ್ಟೆ ಬದಲಿಸಬಹುದು. ಆದರೆ ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.

ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವಕ್ಕೆ ಚಾಲನೆಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ ಬಟ್ಟೆ ಬದಲಿಸಬಹುದು. ಆದರೆ ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು. ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರ ಭದ್ರಸ್ವಾಮಿ ಮಹಾರಥೋತ್ಸವ ಅಂಗವಾಗಿ ಶುಕ್ರವಾರ ನಡೆದ ಧರ್ಮ ಧ್ವಜಾರೋಹಣ ಮತ್ತು ಹರಿದ್ರಾ ಲೇಪನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಆಧುನಿಕ ವಿಜ್ಞಾನ ಎಲ್ಲಿ ನಿರುತ್ತರವಾಗುವುದೋ ಅಲ್ಲಿಂದ ಭಾರತೀಯ ಆಧ್ಯಾತ್ಮ ಚಿಂತನೆ ಪ್ರಾರಂಭಗೊಳ್ಳುತ್ತದೆ ಎಂದು ಡಾ. ಎಸ್.ರಾಧಾಕೃಷ್ಣನ್ ಹೇಳಿದ ಮಾತು ಸತ್ಯ. ಲೌಕಿಕ ಜ್ಞಾನ ಭೌತಿಕ ಬದುಕಿಗೆ ಬೇಕಾದ ಶ್ರದ್ಧೆ, ಆಸಕ್ತಿ, ಪರಿಶ್ರಮ ನಿಷ್ಠೆ ಹಾಗೂ ಸಮರ್ಪಣೆ ಮೂಲಕ ಪಡೆಯಲು ಸಾಧ್ಯ. ಪಾರಮಾರ್ಥಿಕ ಜ್ಞಾನ ಅತ್ಯಮೂಲ್ಯ. ಪಾರಮಾರ್ಥಿಕ ಜ್ಞಾನ ಭವ್ಯ ಹಾಗೂ ಪವಿತ್ರವಾದುದು. ಬದುಕಿನ ಯಶಸ್ಸಿಗೆ ಲೌಕಿಕ ಜ್ಞಾನ ಹೇಗೆ ಅವಶ್ಯಕವೋ ಹಾಗೆಯೇ ನೊಂದ ಬೆಂದ ಮನಕ್ಕೆ ಆಧ್ಯಾತ್ಮಿಕ ಜ್ಞಾನ ಅವಶ್ಯಕ. ಕಲಿಯುವುದು, ಹಣ ಹಾಗೂ ಕೀರ್ತಿ ಸಂಪಾದಿಸುವುದಷ್ಟೇ ಜೀವನದ ಗುರಿಯಲ್ಲ. ಸಂಸ್ಕಾರ ಮತ್ತು ಆದರ್ಶ ಮೌಲ್ಯ ಪರಿಪಾಲಿಸುವ ಅಗತ್ಯವಿದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂಪಿಸಿದ್ದಾರೆ ಎಂದರು.ಯಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿ, ಮಳಲಿ ಮಠದ ಡಾ. ನಾಗಭೂಷಣ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶ್ರೀಗಳು, ಬೇರುಗಂಡಿ ಬೃಹನ್ ಮಠದ ರೇಣುಕ ಮಹಾಂತ ಶ್ರೀಗಳು, ಕೊಣ್ಣೂರು ಮರಡಿಮಠದ ಪವಾಡೇಶ್ವರ ಶ್ರೀಗಳು, ಹುಡುಗಿ ಹಿರೇಮಠದ ಸೋಮೇಶ್ವರ ಶ್ರೀಗಳು, ಅಡ್ನೂರು ಬೃಹನ್ಮಠದ ಅಭಿನವ ಪಂಚಾಕ್ಷರ ಶ್ರೀಗಳು, ಚಿಮ್ಮಲಗಿ ಹಿರೇಮಠದ ಸಿದ್ಧರೇಣುಕ ಶ್ರೀಗಳು ಮತ್ತು ದೊಡ್ಡಸಗರ ನಾಗಠಾಣ ಹಿರೇಮಠದ ಸೋಮೇಶ್ವರ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಜಿಪಂ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ, ವಿಹಿಂಪ ಹಾಸನ ವಿಭಾಗ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಗ್ರಾಪಂ ಮಾಜಿ ಸದಸ್ಯರಾದ ಎಂ.ಎಸ್.ಅರುಣೇಶ್, ಬಿ.ಜಗದೀಶ್ಚಂದ್ರ, ಮಹೇಶ ಆಚಾರ್ಯ, ಕೋಕಿಲಮ್ಮ, ಮಹಮ್ಮದ್ ಹನೀಫ್, ಹಿರಿಯಣ್ಣ, ಸಿ.ವಿ.ಸುನೀಲ್ ಮತ್ತಿತರರು ಉಪಸ್ಥಿತರಿದ್ದರು. ಬೆಳಗ್ಗೆ ನ್ಯಾಮತಿ ಬಸವರಾಜ ಹೊಸಕಟ್ಟೆ ನೇತೃತ್ವದಲ್ಲಿ ನಡೆದ ಶ್ರೀ ವೀರಭದ್ರಸ್ವಾಮಿಗೆ ಗುಗ್ಗುಳ ಪೂಜೆಯಲ್ಲಿ ದಾವಣಗೆರೆ ಶುಭಾ-ಈಶ್ವರಪ್ಪ ಶೆಟ್ಟರು, ಲಲಿತಾ-ಶಿವಯೋಗಿ, ಮಲ್ಲಮ್ಮ-ಪ್ರಭುಶಾಸ್ತ್ರಿ, ಗಿರಿಜಾ-ಕೆ.ವಿ.ಮಲ್ಲಿಕಾರ್ಜುನ ಕುಟುಂಬದವರು ಗುಗ್ಗುಳ ಸೇವಾಕರ್ತರಾಗಿ ಪಾಲ್ಗೊಂಡಿದ್ದರು. ಧ್ವಜಾರೋಹಣ ನಂತರ ಸಂಜೆ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಹರಿದ್ರಾ ಲೇಪನ ಪೂಜಾ ಕಾರ್ಯ ನಡೆಯಿತು.

೨೭ಬಿಹೆಚ್‌ಆರ್ ೫:

ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರ ನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವಕ್ಕೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಧರ್ಮ ಧ್ವಜಾರೋಹಣ ದೊಂದಿಗೆ ಚಾಲನೆ ನೀಡಿದರು. ವಿವಿಧ ಮಠಾಧೀಶರು, ಗಣ್ಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ
56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ