ಆಧ್ಯಾತ್ಮಿಕ ಸಂಪತ್ತು ಶಾಶ್ವತ, ಭೌತಿಕ ಸಂಪತ್ತು ಕ್ಷಣಿಕ: ರಂಭಾಪುರಿ ಶ್ರೀ

KannadaprabhaNewsNetwork |  
Published : Nov 15, 2026, 01:15 AM IST
 | Kannada Prabha

ಸಾರಾಂಶ

ಕಡೂರುಭೌತಿಕ ಸಂಪತ್ತೆಲ್ಲವೂ ಅನ್ಯರ ಪಾಲಾಗುವ ಸಂಭವವಿದೆ. ಆದರೆ ಆಧ್ಯಾತ್ಮಿಕ ಸಂಪತ್ತು ಮಾತ್ರ ಶಾಶ್ವತವಾಗಿ ಉಳಿ ಯುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ಹಿರೇನಲ್ಲೂರು ಗ್ರಾಮದ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಜನಜಾಗೃತಿ ಧರ್ಮ ಸಮಾರಂಭ

ಕನ್ನಡಪ್ರಭ ವಾರ್ತೆ, ಕಡೂರುಭೌತಿಕ ಸಂಪತ್ತೆಲ್ಲವೂ ಅನ್ಯರ ಪಾಲಾಗುವ ಸಂಭವವಿದೆ. ಆದರೆ ಆಧ್ಯಾತ್ಮಿಕ ಸಂಪತ್ತು ಮಾತ್ರ ಶಾಶ್ವತವಾಗಿ ಉಳಿ ಯುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.ತಾಲೂಕಿನ ಹಿರೇನಲ್ಲೂರು ಗ್ರಾಮದ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜಾತಿ, ಧರ್ಮದ ಹೆಸರಿನಲ್ಲಿ ಮನುಷ್ಯರ ನಡುವೆ ದ್ವೇಷ ಮೂಡಿಸುವ ಬದಲು ಎಲ್ಲರೂ ಸಮಾನರು ಎಂಬ ಭಾವನೆ ಸಾರ್ವತ್ರಿಕವಾಗಬೇಕು. ಸಮಾನತೆ ಮತ್ತು ಸಹಬಾಳ್ವೆಯೇ ಸಮಾಜದ ನಿಜವಾದ ಶಕ್ತಿ. ಮಾತು ಮನುಷ್ಯನ ಮನಸ್ಸಿನ ಕೈಗನ್ನಡಿಯಾಗಿದ್ದು, ಸತ್ಯಕ್ಕೆ ಸದಾ ಜಯವಿದೆ. ಸುಳ್ಳು ಹೆಚ್ಚು ಕಾಲ ಉಳಿಯುವುದಿಲ್ಲ ಎಂದರು.ಯುವಜನತೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು. ಹಿರಿಯರಿಗೆ ಗೌರವ ನೀಡುವ ಗುಣ ರೂಢಿಸಿಕೊಳ್ಳಬೇಕು. ಇದರಿಂದ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಜಗದ್ಗುರು ರೇಣುಕಾಚಾರ್ಯರ ಸಂದೇಶ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಬೀರೂರು ಖಾಸಾ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಧರ್ಮದ ಬಗ್ಗೆ ಮಾತನಾಡುವುದು ಸುಲಭ. ಆದರೆ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಕಷ್ಟ. ಹೃದಯ ಶುದ್ಧವಾಗಿಟ್ಟುಕೊಂಡು ಧರ್ಮದ ಮಾರ್ಗದಲ್ಲಿ ಸಾಗಬೇಕು ಎಂದರು.ಹಣ್ಣೆ ಮಠದ ಮರುಳಸಿದ್ಧ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಗ್ರಂಥಗಳ ಅಧ್ಯಯನದಿಂದ ಬೌದ್ಧಿಕ ಪ್ರಗತಿ ಸಾಧ್ಯ. ಆದರೆ ಓದಿದ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಧರ್ಮಮಾರ್ಗದಲ್ಲಿ ನಡೆಯುವುದೇ ನಿಜವಾದ ಸಾರ್ಥಕತೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಚ್.ಎಂ. ಲೋಕೇಶ್ ಮಾತನಾಡಿ, ವೀರಶೈವ ಧರ್ಮ ಎಲ್ಲರ ಒಳಿತನ್ನೇ ಬಯಸುವ ಧರ್ಮ. ಧರ್ಮದ ಸಾರವನ್ನು ಜಗತ್ತಿಗೆ ಸಾರಲು ಜಗದ್ಗುರುಗಳು ನಮ್ಮೊಂದಿಗಿರುವುದು ನಮ್ಮ ಸುಕೃತ ಎಂದರು.ಕಾರ್ಯಕ್ರಮಕ್ಕೂ ಮುನ್ನ ಹಿರೇನಲ್ಲೂರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿದರು.ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೆ.ಬಿದರೆ ದೊಡ್ಡಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಚೌಳಹಿರಿಯೂರಿನ ಚಂದ್ರಮೌಳಿ (ಅಪ್ಪಯ್ಯ), ಬೆಂಗಳೂರಿನ ಅಶೋಕ ಶಾಸ್ತ್ರಿ, ಎಸ್.ಟಿ. ರೇಣುಕಾರಾಧ್ಯ, ಮುಂಡ್ರೆ ಗಿರಿರಾಜ್ ಮತ್ತಿತರರು ಉಪಸ್ಥಿತರಿದ್ದರು.ಫೋಟೋ

ಕಡೂರು ತಾಲೂಕಿನ ಹಿರೇನಲ್ಲೂರು ಗ್ರಾಮದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಬೀರೂರು ಖಾಸಾ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಲಿಯಿಂದ ಮುನಿರಾಬಾದ್‌ನತ್ತ ಹೆಜ್ಜೆ ಹಾಕಿದ ನೂರಾರು ರೈತರು
ಜನರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ: ಅಶೋಕ ಶಿಗ್ಗಾಂವಿ