ಹಾವೇರಿ: ಇಲ್ಲಿನ ಪ್ರಸಿದ್ಧ ಹುಕ್ಕೇರಿ ಮಠದ ಮಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಅವರ 15ನೇ ವರ್ಧಂತಿ ನಿಮಿತ್ತ ಹಮ್ಮಿಕೊಂಡಿದ್ದ ರಜತ ತುಲಾಭಾರ ಸೇವೆಯು ಸಹಸ್ರ ಭಕ್ತಾಧಿಗಳ ಹರ್ಷೋದ್ಗಾರದೊಂದಿಗೆ ಭಕ್ತಿಭಾವದಿಂದ ಸೋಮವಾರ ರಾತ್ರಿ ವೈಭವದಿಂದ ನೆರವೇರಿತು.
ಹುಕ್ಕೇರಿಮಠದ ಜಾತ್ರಾ ಮಹೋತ್ಸವ ನಿಮಿತ್ತ ಡಿ. 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಡಿ. 30ರಂದು ಶ್ರೀ ಮಠದ ಪೂಜ್ಯದ್ವಯರ ಪುಣ್ಯಸ್ಮರಣೋತ್ಸವದೊಂದಿಗೆ ಎಲ್ಲಾ ಕಾರ್ಯಕ್ರಮಗಳು ಮಂಗಲಗೊಳ್ಳಲಿವೆ.
ರಜತ ತುಲಾಭಾರ ಮಹೋತ್ಸವದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದರಾಜ ಯೋಗೀಂದ್ರ ಸ್ವಾಮೀಜಿ, ಶಿರಸಿಯ ಅಟವಿ ಶಿವಲಿಂಗ ಸ್ವಾಮೀಜಿ, ಮಾದನಹಿಪ್ಪರಗಿಯ ಅಭಿನವ ಶಿವಲಿಂಗ ಸ್ವಾಮೀಜಿ, ಅಕ್ಕಿಆಲೂರು ಶಿವಬಸವ ಸ್ವಾಮೀಜಿ, ಮಣಕವಾಡದ ಮೃತ್ಯುಂಜಯ ಸ್ವಾಮೀಜಿ, ಶೇಗುಣಸಿ ಡಾ. ಮಹಾಂತಪ್ರಭು ಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಎಸ್.ಆರ್ ಪಾಟೀಲ, ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ, ಯಶೋದಾ ವಂಟಗೋಡಿ, ರುಚಿ ಬಿಂದಲ್, ಭರತ ಬೊಮ್ಮಾಯಿ, ಸಂಜೀವಕುಮಾರ ನೀರಲಗಿ ಸೇರಿದಂತೆ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಜಾತ್ರಾ ಮಹೋತ್ಸವ ಸಮಿತಿ, ಬೆಳ್ಳಿ ತುಲಾಭಾರ ಸಮಿತಿ, ಪ್ರಸಾದ ನಿಲಯ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಾಜಿ ಶಾಸಕ ಶಿವರಾಜ ಸಜ್ಜನರ ಸ್ವಾಗತಿಸಿದರು. ನಾಗರಾಜ ನಡುವಿನಮಠ ನಿರೂಪಿಸಿದರು.