ವಿದ್ಯಾರ್ಥಿಗಳ ಉತ್ಸಾಹ ಪ್ರೇರೇಪಿಸಲು ಕ್ರೀಡಾ ಚಟುವಟಿಕೆ ನೆರವು: ಡಾ.ವಿ.ಜಗದೀಶ್

KannadaprabhaNewsNetwork |  
Published : Oct 20, 2025, 01:02 AM IST
16ಕೆಎಂಎನ್ ಡಿ23  | Kannada Prabha

ಸಾರಾಂಶ

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗವು ಮಂಡ್ಯ ವಿವಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗಗಳ ಚದುರಂಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇಂದು ಜಗತ್ತಿನಲ್ಲಿ ಕ್ರೀಡೆ ಉನ್ನತ ಸ್ಥಾನ ಗಳಿಸಿದೆ. ಭಾರತವು ಎಲ್ಲಾ ಕ್ರೀಡೆಗಳಲ್ಲಿಯೂ ತನ್ನ ಪ್ರತಿಭೆಯನ್ನು ತೋರಿಸುತ್ತಿದೆ ಎಂದರು.

ಕೆ.ಆರ್.ಪೇಟೆ: ವಿದ್ಯಾರ್ಥಿಗಳ ಉತ್ಸಾಹವನ್ನು ಪ್ರೇರೇಪಿಸಲು ಕ್ರೀಡಾ ಚಟುವಟಿಕೆಗಳು ನೆರವಾಗುತ್ತವೆ. ಸದಾ ದೇಹ ಹಾಗೂ ಮನಸ್ಸು ಚಟುವಟಿಕೆಯಿಂದ ಕೂಡಿರಲು ಚದುರಂಗ ಬಹಳ ಉಪಯುಕ್ತ ಕ್ರೀಡೆ ಎಂದು ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ವಿ.ಜಗದೀಶ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗವು ಮಂಡ್ಯ ವಿವಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗಗಳ ಚದುರಂಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇಂದು ಜಗತ್ತಿನಲ್ಲಿ ಕ್ರೀಡೆ ಉನ್ನತ ಸ್ಥಾನ ಗಳಿಸಿದೆ. ಭಾರತವು ಎಲ್ಲಾ ಕ್ರೀಡೆಗಳಲ್ಲಿಯೂ ತನ್ನ ಪ್ರತಿಭೆಯನ್ನು ತೋರಿಸುತ್ತಿದೆ ಎಂದರು.

ಕಾಲೇಜು ಕ್ರೀಡಾ ವಿಭಾಗದ ಸಂಚಾಲಕರು ಮಂಡ್ಯ ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಹಯೋಗದಲ್ಲಿ ಚದುರಂದ ಸ್ಪರ್ಧೆ ಆಯೋಜಿಸಿದ್ದು, 70ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳೆಯರ ವಿಭಾಗದಲ್ಲಿ ಪ್ರಥಮ ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ, ದ್ವಿತೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಲಗೂರು ಹಾಗೂ ತೃತೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್.ಪೇಟೆ ಪಡೆದುಕೊಂಡರೆ, ಪುರುಷರ ವಿಭಾಗದಲ್ಲಿ ಪ್ರಥಮ ಶ್ರೀಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ನಾಗಮಂಗಲ, ದ್ವಿತೀಯ ಬಿಜಿಎಸ್ ಬಿಪಿಎಡ್ ಕಾಲೇಜು ಆದಿಚುಂಚನಗಿರಿ ಹಾಗೂ ತೃತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಂಡವಪುರ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಮಂಡ್ಯ ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಾಧಿಕಾರಿ ಡಾ.ಶ್ರೀನಿವಾಸ್, ಕಾಲೇಜಿನ ಕ್ರೀಡಾ ಸಮಿತಿ ಸಂಚಾಲಕರಾದ ಡಿ.ಎನ್.ಕುಮಾರಸ್ವಾಮಿ, ಐಕ್ಯೂಎಸಿ ಸಂಚಾಲಕ ಬಿ.ಎಂ.ಉಮೇಶ್, ಪ್ರಾಧ್ಯಾಪಕರಾದ ಡಾ.ಸಿ.ರಮೇಶ್, ಡಾ.ಜಯಕೀರ್ತಿ, ಡಾ.ಜಿ.ಸವಿತಾ, ಡಾ.ಎಂ.ಎನ್.ರಾಜೇಶ್ವರಿ, ಡಾ.ಡಿ.ಮಹೇಶ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಅತಿಥಿ ಉಪನ್ಯಾಸಕ ಕೆ.ಎನ್.ಮಲ್ಲೇಶ್, ಕಚೇರಿ ವ್ಯವಸ್ಥಾಪಕಿ ಜೆ.ಭುವನೇಶ್ವರಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಯನ್ನು ಮಕ್ಕಳಿಗೆ ಧಾರೆ ಎರೆಯಿರಿ
ಮಕ್ಕಳ ಸಮಸ್ಯೆ ಪರಿಹರಿಸುವುದು ಗ್ರಾಪಂ ಕರ್ತವ್ಯ: ಗೀತಾಮಣಿ