ಇತ್ತೀಚಿನ ಖಾಯಿಲೆಗಳಿಗೆ ಕ್ರೀಡೆಗಳು ರಾಮಬಾಣ: ಅಶೋಕ ಮೆಹ್ತಾ

KannadaprabhaNewsNetwork |  
Published : Apr 29, 2026, 01:15 AM IST
್ಿ | Kannada Prabha

ಸಾರಾಂಶ

ಕ್ರೀಡೆ ಮನುಷ್ಯನ ಬಹು ಮುಖ್ಯ ಅಂಗವಾಗಿದ್ದು ಇತ್ತೀಚಿನ ಖಾಯಿಲೆಗಳಿಗೆ ಕ್ರೀಡೆಗಳು ರಾಮಬಾಣವಾಗುತ್ತಿವೆ ಈ ನಿಟ್ಟಿನಲ್ಲಿ ಮಕ್ಕಳು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಾಹೇ ವಿವಿ ಕುಲಸಚಿವ ಅಶೋಕ ಮೆಹ್ತಾ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಕ್ರೀಡೆ ಮನುಷ್ಯನ ಬಹು ಮುಖ್ಯ ಅಂಗವಾಗಿದ್ದು ಇತ್ತೀಚಿನ ಖಾಯಿಲೆಗಳಿಗೆ ಕ್ರೀಡೆಗಳು ರಾಮಬಾಣವಾಗುತ್ತಿವೆ ಈ ನಿಟ್ಟಿನಲ್ಲಿ ಮಕ್ಕಳು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಾಹೇ ವಿವಿ ಕುಲಸಚಿವ ಅಶೋಕ ಮೆಹ್ತಾ ಅವರು ತಿಳಿಸಿದರು.ಎಸ್ ಎಸ್ ಐ ಟಿ ಕ್ಯಾಂಪಸ್ ಆವರಣದಲ್ಲಿ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ರಾಜ್ಯ ಮಟ್ಟದ ಅಂತರ್ ಕಾಲೇಜು ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಗೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ಕಲಿಕೆಯ ಮಧ್ಯೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಕ್ರೀಡೆಗಳಲ್ಲಿ ಉತ್ತಮವಾದ ಅವಕಾಶಗಳು ದೊರಕುತ್ತದೆ ಜೊತೆಗೆ ನಿಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಒಂದು ಉತ್ತಮವಾದ ವೇದಿಕೆ ನಿರ್ಮಾಣವಾಗುತ್ತದೆ ಎಂದು ಕಿವಿ ಮಾತು ಹೇಳಿದರು. ಎಸ್‌ಎಸ್‌ಐಟಿ ಕಾಲೇಜಿನ ದೈಹಿಕ ಶಿಕ್ಷಣದ ವಿಭಾಗದ ನಿರ್ದೇಶಕ ಹಾಗೂ ಟೂರ್ನಮೆಂಟ್ ನ ಆಯೋಜಕರಾದ ರುದ್ರೇಶ್ ಕೆ.ಆರ್ ಮಾತನಾಡಿ, ರಾಜ್ಯ ಪ್ರತಿಷ್ಠಿತ ಕಾಲೇಜುಗಳ ಪೈಕಿ ಸುಮಾರು ಹದಿನಾರು ಕಾಲೇಜುಗಳಿಂದ ವಿವಿಧ ತಂಡಗಳು ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ನಿಯಮಾವಳಿಗಳ ಪ್ರಕಾರ ಪಂದ್ಯಾವಳಿಗಳು ನಡೆಯುತ್ತಿದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಪ್ರಶಸ್ತಿಗಳನ್ನು ಕಾಲೇಜಿಗೆ ತಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಾಹೇ ವಿವಿ ಪರೀಕ್ಷಾ ನಿಯಂತ್ರಣಾಧಿಕಾರಿಯಾದ ಡಾ. ಸುನಿಲ್ ಕೆ, ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ ಎಂ ನಡಕಟ್ಟಿ, ಎಸ್‌ಎಸ್‌ಐಟಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಜಿಲ್ಲೆಯ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ರಾಫಿಕ್‌ ಸಮಸ್ಯೆ ನಿಯಂತ್ರಣ ಕ್ರಮ ವಹಿಸಿ
ಕೆರೆ ಒತ್ತುವರಿ ತೆರವುಗೊಳಿಸಿ ನೀರು ಮಲೀನ ತಪ್ಪಿಸಿ