ಕೆ.ಆರ್.ಪೇಟೆ:
ತಾಲೂಕಿನ ಬಲ್ಲೇನಹಳ್ಳಿಯಲ್ಲಿ ಸ್ನೇಹ ಜೀವಿ ಬಳಗದ ಯುವಕರ ವತಿಯಿಂದ ಆಯೋಜಿಸಿದ್ದ ಬಿಪಿಎಲ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಸ್ನೇಹ ಜೀವಿ ಬಳಗದ ಯುವಕರು ಗ್ರಾಮದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಮಾಡುತ್ತಿರುವ ಪ್ರಯತ್ನ ಅಭಿನಂದನೀಯ ಎಂದರು.
ಸಂಘಟನೆಗಳು ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕೆಲಸ ಮಾಡುತ್ತಿವೆ. ಕ್ರೀಡೆಯು ಯುವಕರ ಸರ್ವತೋಮುಖ ಬೆಳವಣಿಗೆಗೆ ಅತ್ಯಂತ ಅಗತ್ಯ. ಕ್ರಿಕೆಟ್ ನಂತಹ ತಂಡದ ಆಟಗಳು ಶಿಸ್ತು, ಸಹಕಾರ, ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದರು. ಈ ವೇಳೆ ವಿದ್ಯುತ್ ಗುತ್ತಿಗೆದಾರ ಬಲ್ಲೆನಹಳ್ಳಿ ರಾಮು, ದರ್ಶನ್, ಮಂಜುನಾಥ್, ಪ್ರಶಾಂತ್ , ಉಮೇಶ್, ನಂದನ್, ಸಚಿನ್, ಕುಮಾರ್, ಹೇಮಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಪೌರಕಾರ್ಮಿಕರು ಸುರಕ್ಷಾ ಪರಿಕರ ಧರಿಸಿ ಕೆಲಸ ಮಾಡಬೇಕು: ಸತೀಶ್ ಕುಮಾರ್
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಪಂಚಾಯತ್ ರಾಜ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಕೇಂದ್ರ ಸರಕಾರದ ‘ನಮಸ್ತೆ ಯೋಜನೆಯಡಿ’ ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಿ ಮಾತನಾಡಿದರು.ನಮ್ಮ ಸುತ್ತಮುತ್ತಲಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಪೌರಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಧರಿಸದೆ ಯಾವುದೇ ಕಾರಣಕ್ಕೂ ಸ್ವಚ್ಛತೆ ಕೆಲಸದಲ್ಲಿ ತೊಡಗಿಕೊಳ್ಳಬಾರದು ಎಂದರು.