ಕನ್ನಡಪ್ರಭ ವಾರ್ತೆ ಸಿರಿಗೆರೆ
ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ನೆಹರು ಯುವ ಇಲಾಖೆ ಚಿತ್ರದುರ್ಗ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ ಚಿತ್ರದುರ್ಗ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಒಳಾಂಗಣ ಕ್ರೀಡೆ ಬುದ್ದಿ ಹೆಚ್ಚಿಸಿದರೆ ಹೊರಾಂಗಣ ಕ್ರೀಡೆ ಶ್ರಮವನ್ನು ಹೆಚ್ಚಿಸುತ್ತದೆ ಸದೃಢ ದೇಹವನ್ನು ಗಟ್ಟಿಗೊಳಿಸಲು ಸಹಕಾರಿಯವಾಗಲಿದೆ ಎಂದು ಯುವ ಕ್ರೀಡಾಪಟುಗಳಿಗೆ ತಿಳಿಸಿದರು. ಮಡಿಲು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆ ತಾಲೂಕು ಮಟ್ಟದ ಕ್ರೀಡೆಯನ್ನು ಆಯೋಜನೆ ಮಾಡಿರುವುದು ಸಂತಸದ ವಿಚಾರ ಒಂದು ಕ್ರೀಡೆಯನ್ನು ಆಯಚನ ಮಾಡುವುದರ ಮೂಲಕ ಯುವಕರನ್ನು ಒಗ್ಗೂಡಿಸಿ ಕ್ರೀಡೆಯಲ್ಲಿ ಭಾಗವಹಿಸಲು ಉತ್ತೇಜನವನ್ನು ನೀಡುವಂತಹ ಕಾರ್ಯ ಮಡಿಲು ಸಂಸ್ಥೆ ಮಾಡುತ್ತಿದೆ. ಯುವ ಸಮೋಹ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯದ ಕಡೆಗೆ ಗಮನಹರಿಸಬೇಕಾಗಿದೆ ಎಂದರು.
ಕರ್ನಾಟಕ ಭ್ರಷ್ಟಾಚಾರ ಮುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಮಾತನಾಡಿ, ಮಡಿಲು ಸಂಸ್ಥೆ ಈಗಾಗಲೇ ಈಗಾಗಲೇ ಜಿಲ್ಲೆಯಾದ್ಯಂತ ಉತ್ತಮ ರೀತಿಯ ಕೆಲಸ ಮಾಡಲಾಗುತ್ತಿದ್ದು, ಹಾಲುಘಟ್ಟ ಗ್ರಾಮದಲ್ಲೂ ಸಹ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಮುಂದಿನ ದಿನಗಳಲ್ಲಿ ಉತ್ತಮ ಮಟ್ಟಕ್ಕೆ ಈ ಸಂಸ್ಥೆಯ ಹೆಸರಾಗಬೇಕು ಎನ್ನುವುದು ನಮ್ಮ ಅಭಿಲಾಷೆ ನಮ್ಮದು ಎಂದರು.ಗ್ರಾಮ ಪಂಚಾಯಿತಿ ವತಿಯಿಂದ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಧಿಕಾರಿಗಳು ನಿರ್ದಿಷ್ಟ ಜಾಗವನ್ನು ನಿಗದಿ ಮಾಡಿ ಕೊಟ್ಟರೆ ರಾಜ್ಯಮಟ್ಟದಲ್ಲಿ ನಡೆಯುವಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತಹ ಯುವಕರಿಗೆ ಸಹಕಾರ ನೀಡಬೇಕಾಗಿ ಮನವಿ ಮಾಡಿದರು.
ಭರಮಸಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಲಿಂಗನಗೌಡ ನೆಗಳೂರು ಮಾತನಾಡಿ, ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಸಂತಸ ವಿಚಾರವಾಗಿದೆ ಆದರೆ ಅವರ ಜೀವಕ್ಕೆ ರಕ್ಷಣೆ ಅವಶ್ಯಕತೆ ಇದೆ ಪ್ರತಿಯೊಬ್ಬ ಬೈಕ್ ಸವಾರರು ಹೆಲ್ಮೆಟ್ ಧರಿಸುವುದರ ಜೊತೆಗೆ ತಮ್ಮ ಪ್ರಾಣವನ್ನು ಕಾಪಾಡಿ ಕೊಳ್ಳಬೇಕೆಂದು ಕ್ರೀಡಾಪಟುಗಳಿಗೆ ತಿಳಿಸಿದರು.