ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ

KannadaprabhaNewsNetwork |  
Published : Jan 07, 2024, 01:30 AM IST
ಫೋಟೋ : 6 ಹೆಚ್‌ಎಸ್‌ಕೆ 1 ಹೊಸ್ಕೊಟಿ ನಗರದ ಚೆನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ೪೩ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏಷ್ಯಡ್ ಹಿರಿಯ ಕ್ರೀಡಾ ಕೂಟದಲ್ಲಿ ಪದಕ ಪಡೆದವರನ್ನು ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕರ್ನಾಟಕ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ, ೪೩ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಷಿಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ. ಪ್ರತಿಯೊಬ್ಬರು ಪ್ರತಿದಿನ ಅರ್ಧ ಗಂಟೆ ಕ್ರೀಡೆಗೆ ಮೀಸಲಿಡಬೇಕು. ಇದರಿಂದ ದೇಹ, ಮನಸ್ಸು ಉಲ್ಲಸಿತಗೊಳ್ಳುತ್ತದೆ. ಹಾಗೂ ವಿವಿಧ ರೋಗಗಳಿಂದ ರಕ್ಷಣೆ ಸಾಧ್ಯ ಎಂದರು.

ಮಾಸ್ಟರ್ಸ್ ಅಥ್ಲೆಟಿಕ್ಸ್ ಪೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀ ಡೇವಿಡ್ ಪ್ರೇಮ್ ನಾಥ್ ಮಾತನಾಡಿ, ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕಾದರೆ ಪ್ರೋತ್ಸಾಹ ಮುಖ್ಯ. ಶಾಸಕರ ಸಹಕಾರದಿಂದ ಹೊಸಕೋಟೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆ ಆಯೋಜಸಲಾಗಿದೆ. 9 ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿದ್ದಾರೆಂದರು.

ಕಾರ್ಯಕ್ರಮದಲ್ಲಿ ಟೌನ್ ಅಧ್ಯಕ್ಷ ಶ್ರೀ ಬಿ.ವಿ.ಬೈರೇಗೌಡ, ನಗರಸಭೆ ಸದಸ್ಯ ಕೇಶವಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೆಷನ್ ಅಧ್ಯಕ್ಷ ನಾರಾಯಣಸ್ವಾಮಿ, ಜಂಟಿ ಕಾರ್ಯದಶಿರ್ ಸಿ.ಷಣ್ಮುಗಂ, ಕಾರ್ಯದರ್ಶಿ ಕೆ.ಮಂಜುನಾಥ್ ಇತರರು ಹಾಜರಿದ್ದರು.

ಬಾಕ್ಸ್..........

ಏಷ್ಯಾ ಗೇಮ್ಸ್‌ನಲ್ಲಿ 111 ಚಿನ್ನದ ಪದಕ:

ಇತ್ತೀಚೆಗೆ ನಡೆದ ಏಷ್ಯಾ ಗೇಮ್ಸ್‌ನಲ್ಲಿ ಭಾರತ 111 ಪದಕಗಳನ್ನ ಗೆಲ್ಲುವುದರ ಮೂಲಕ ಪ್ರಪಂಚದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ದಿನಗಳಿಗಿಂತ ಪ್ರಸ್ತುತ ದಿನಗಳಲ್ಲಿ ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ಸಹ ಸಿಗುತ್ತಿದೆ. ಅದರ ಪರಿಣಾಮವಾಗಿಯೇ ಕ್ರೀಡಾಕ್ಷೇತ್ರದಲ್ಲಿ ಸಹ ಭಾರತ ಅತ್ಯುತ್ತಮ ಸಾಧನೆ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಫೋಟೋ : 6 ಹೆಚ್‌ಎಸ್‌ಕೆ 1

ಹೊಸಕೋಟೆಯಲ್ಲಿ ೪೩ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪದಕ ವಿಜೇತರನ್ನು ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...