ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Sep 23, 2024, 01:32 AM IST
ತರೀಕೆರೆಯಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಗಾಟನೆ | Kannada Prabha

ಸಾರಾಂಶ

ತರೀಕೆರೆ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕೊಡುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಶನಿವಾರ ಜಿಲ್ಲಾಡಳಿತ, ಜಿಪಂ, ತಾಲೂಕು ಅಡಳಿತ, ತಾಪಂ ತರೀಕೆರೆ-ಅಜ್ಜಂಪುರ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಪುರಸಭೆ, ತರೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಅತಿಥೇಯ ಶಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಬದ ಬೀದಿ ತರೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ತರೀಕೆರೆಯಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಗಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕೊಡುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಶನಿವಾರ ಜಿಲ್ಲಾಡಳಿತ, ಜಿಪಂ, ತಾಲೂಕು ಅಡಳಿತ, ತಾಪಂ ತರೀಕೆರೆ-ಅಜ್ಜಂಪುರ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಪುರಸಭೆ, ತರೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಅತಿಥೇಯ ಶಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಬದ ಬೀದಿ ತರೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ವಿದ್ಯೆ ಮತ್ತು ಕ್ರೀಡೆ ಎರಡು ಬಹಳ ಮುಖ್ಯ, ಕ್ರೀಡೆಯಿಂದ ಮನಸ್ಸು ಉಲ್ಲಾಸವಾಗುತ್ತದೆ. ವಿದ್ಯಾರ್ಥಿಗಳು ದೊಡ್ಡ ಗುರಿ ಹೊಂದಿರಬೇಕು. ಒಲಂಪಿಕ್ ಇತ್ಯಾದಿ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವಂತಹ ಗುರಿ ಹೊಂದಿರಬೇಕು. ದೊಡ್ಡ ಅಧಿಕಾರಿಯಾಗಬೇಕು ಎಂಬ ಗುರಿ ಹೊಂದಿರಬೇಕು. ಯುವಕರಲ್ಲಿ ಅಂತಹ ಶಕ್ತಿ ಇದೆ. ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿ ಮಾಡಲಾಗಿದೆ ಎಂದು ಹೇಳಿದರು.ಎಸ್.ಎಸ್.ಎಲ್.ಸಿ. ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರ ಪ್ರಯತ್ನ ಅಗತ್ಯ, ಅದಕ್ಕಾಗಿ ಶಾಲೆ ಮುಖ್ಯೋಪಾಧ್ಯಾಯರನ್ನು ಆಹ್ವಾನಿಸಿ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಹೇಳಿದರು.ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ಕೊಡಲಾಗುವುದು. ಪುರಸಭೆಯಿಂದ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಶೀಘ್ರ ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರೀಯಾಶೀಲರಾಗಬಹುದು ಎಂದು ಹೇಳಿದರು.ಪುರಸಭೆ ಸದಸ್ಯ ಟಿ.ಜಿ. ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ.ಪರಶುರಾಮಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಜಯ ಕುಮಾರ್ ಮಾತನಾಡಿದರು. ಪುರಸಭೆ ನಾಮಿನಿ ಸದಸ್ಯ ಆದಿಲ್ ಪಾಷ, ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜುನಾಥ್, ಶಾಲಾಭಿವೃದ್ದಿ ಸಮಿತಿ ಸದಸ್ಯರು, ತಾ.ದೈ.ಶಿ. ಪರಿವೀಕ್ಷಕರು ಎಂ.ವೇದಮೂರ್ತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು, ಮುಖ್ಯೋಪಾಧ್ಯಾಯರು ಎಂ.ಬಿ.ರಾಮಚಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ,ಶಿಕ್ಷಣ ಇಲಾಖೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಭಾಗವಹಿಸಿದ್ದರು.

22ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಪುರಸಬೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ಪುರಸಬೆ ಸದಸ್ಯ ಟಿ.ಜಿ.ಲೋಕೇಶ್, ಪುರಸಭೆ ನಾಮಿನಿ ಸದಸ್ಯ ಆದಿಲ್ ಪಾಷಾ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ , ಮುಖ್ಯೋಪಾಧ್ಯಾಯ ಎಂ.ಬಿ.ರಾಮಚಂದ್ರಪ್ಪ ಮತ್ತಿತರರು ಇದ್ದರು.

PREV

Recommended Stories

ಧರ್ಮಸ್ಥಳ ಪ್ರಕರಣ ಮುಚ್ಚಿ ಹಾಕುವ ಯತ್ನ
ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ನೀರು ಕಲುಷಿತ