ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಭಾರತ ಶ್ರೇಷ್ಠ ಹಾಕಿ ಆಟಗಾರರಲ್ಲಿ ಒಬ್ಬರಾದ ಮೇಜರ್ ಧ್ಯಾನಚಂದ ಅವರ ಜನ್ಮದಿದ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತದೆ. ಈ ದಿನ ರಾಷ್ಟ್ರದ ಕ್ರೀಡಾವೀರರನ್ನು ಗೌರವಿಸುವ ದಿನವಾಗಿದೆ. ಮೇಜರ್ ಧ್ಯಾನಚಂದ ಅವರು ಓಲಿಂಪಿಕ್ ಚಾಂಪಿಯನ್ ಹಾಕಿಯಲ್ಲಿ ಸತತವಾಗಿ ಮೂರು ಬಾರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮೇಜರ್ ಧ್ಯಾನಚಂದ್ ಅವರು ಹಾಕಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಚಾಂಪಿಯನ್ ಪಟ್ಟ ಪಡೆದುಕೊಂಡಿದ್ದರು. ಅನೇಕ ಕ್ರೀಡಾಪಟುಗಳು ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆಗಳು ಕೇವಲ ಮನರಂಜನೆ ಮಾತ್ರ ಅಲ್ಲ, ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಜೀವನದಲ್ಲಿ ಶಿಸ್ತು, ಸಹಕಾರ, ಸಹನೆ, ಧೈರ್ಯ, ಗುರಿ, ವಿನಯ ಮುಖ್ಯವಾಗಿದ್ದು, ಇವುಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸುವ ಮುಖ್ಯ ಉದ್ದೇಶದ ದೇಶದ ಉತ್ತಮ ಕ್ರೀಡಾಪಟುಗಳನ್ನು ನೆನಪಿಸಿಕೊಳ್ಳುವ ದಿನವಾಗಿದೆ. ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಲು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಜೀವನದಲ್ಲಿ ಸೋಲು-ಗೆಲುವು ಇದ್ದೇ ಇರುತ್ತದೆ. ಅದನ್ನು ಸಮನಾಗಿ ತೆಗೆದುಕೊಂಡು ಮುಂದೆ ಸಾಗಬೇಕಿದೆ.
ಶಶಿಧರ ಕುರೇರ ಜಿಪಂ ಸಿಇಒ