ಕ್ರೀಡೆ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯ: ಪ್ರೊ.ವೀರಣ್ಣ

KannadaprabhaNewsNetwork | Published : Nov 11, 2024 1:09 AM

ಸಾರಾಂಶ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀದರ್‌ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣ ದಲ್ಲಿ 18ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟದ (ಕ್ರೀಡಾಕುಂಭ) ಸಮಾರೋಪ ಸಮಾರಂಭ ಜರುಗಿತು.

ಕನ್ನಡಪ್ರಭ ವಾರ್ತೆ, ಬೀದರ್‌

ಕ್ರೀಡೆಯು ನಮ್ಮ ಸರ್ವತೋಮುಖ ಅಭಿವೃದ್ದಿಗೆ ಅವಶ್ಯಕ ಎಂದು ಕರ್ನಾಟಕ ಪಶು ಹಾಗೂ ಮಿನುಗಾರಿಕಾ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ. ವೀರಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀದರ್‌ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣ ದಲ್ಲಿ 18ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟದ (ಕ್ರೀಡಾಕುಂಭ) ಜರುಗಿದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಿಶ್ವವಿದ್ಯಾಲಯವು ಪ್ರತಿ ವರ್ಷ ಕ್ರೀಡೆಗಳನ್ನು ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.ವಿಶ್ವ ವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ಸದಸ್ಯ ಬಸವರಾಜ ಭತಮುರಗೆ ಮಾತನಾಡಿ, ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿಶ್ವ ವಿದ್ಯಾಲಯದ ಉತ್ತಮ ತಂಡವನ್ನು ರಚಿಸುವಂತೆ ಸಲಹೆಯಿತ್ತರು.ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪಶು ವೈದ್ಯಕೀಯ, ಡೈರಿ ಹಾಗೂ ಮೀನುಗಾರಿಕಾ ಮಹಾವಿದ್ಯಾಲಯಗಳಿಂದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ನ.9ರಂದು ಜರುಗಿದ ಸಮಾರೋಪದಲ್ಲಿ ಕರ್ನಾಟಕ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್‌.ಸಿ.ಇಂದ್ರೇಶ, ವೀಶೇಷ ಆಹ್ವಾನಿತರಾಗಿ ವಿಶ್ವವಿದ್ಯಾಲಯ ದ ಅಧಿಕಾರಿಗಳು ರಾಜ್ಯದ ವಿವಿಧೆಡೆಯಿಂದ ಪಾಲ್ಗೊಂಡಿದ್ದರು. ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್‌ ಎಂ.ಕೆ.ತಾಂದಳೆ ಅಧ್ಯಕ್ಷತೆ ವಹಿಸಿದ್ದರು.ಕ್ರೀಡಾಕೂಟದಲ್ಲಿ ವೈಯಕ್ತಿಕ ಪಾರಿತೋಷಕವನ್ನು ಪುರುಷರ ವಿಭಾಗದಲ್ಲಿ ಬೆಂಗಳೂರು ಪಶು ವೈದ್ಯಕೀಯ ಮಹಾವಿದ್ಯಾಲಯದ ಧ್ಯಾನ್‌ ಸಿ.ಕೆ. ಮತ್ತು ಮಹಿಳೆಯರ ವಿಭಾಗದಲ್ಲಿ ಹಾಸನ ಪಶು ವೈದ್ಯಕೀಯ ಮಹಾವಿದ್ಯಾಲಯದ ಕೃಪಾ ಬಿ.ಆರ್‌. ಪಡೆದರು.ಅಥ್ಲೆಟಿಕ್‌ ವಿಭಾಗದ ಚಾಂಪಿಯನ್‌ ಆಗಿ ಪಶು ವೈದ್ಯಕೀಯ ಮಹಾವಿದ್ಯಾಲಯ ಹಾಸನ ಹಾಗೂ ದ್ವಿತೀಯ ಸ್ಥಾನದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಪಡೆದಿದ್ದಾರೆ. ಕ್ರೀಡಾಕೂಟದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಹಾಗೂ ಬೆಂಗಳೂರು ಮೊದಲನೇ ಸ್ಥಾನ ಪಡೆದರೆ ದ್ವಿತೀಯ ಸ್ಥಾನವನ್ನು ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯ ಪಡೆದಿರುತ್ತಾರೆ. ಸಮಗ್ರ ಚಾಂಪಿಯನ್‌ಶಿಪ್‌ನ್ನು ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಹಾಗೂ ದ್ವಿತೀಯ ಸ್ಥಾನವನ್ನು ಪಶು ವೈದ್ಯಕೀಯ ಮಹಾವಿದ್ಯಾಲಯ ಹಾಸನ ಪಡೆದಿದ್ದಾರೆ.ಡಾ.ಎಚ್‌.ಸಿ.ಇಂದ್ರೇಶ್‌ ಮತ್ತು ಡಾ.ಶ್ರೀಕಾಂತ ಕುಲಕರ್ಣಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡಾ.ತಾಂದಳೆ ಅವರು ಈ ಕ್ರೀಡಾವಳಿ ಆಯೋಜಿಸಿದ ಪಶು ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.

Share this article