4ನೇ ಜಿಲ್ಲಾ ಮಟ್ಟಡ ಕ್ರೀಡಾಕೂಟ ಉದ್ಘಾಟನೆ ಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಮತ್ತು ನೌಕರರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳು ಜಿಲ್ಲಾ ಘಟಕ ಹಾಗೂ ಜಿಪಂನ ಸಹಯೋಗದಲ್ಲಿ ನಡೆದ ೪ನೇ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಕ್ರೀಡೆಯಿಂದ ದೇಹ ಹಾಗು ಮನಸ್ಸು ಸದೃಡ ಆಗುತ್ತದೆ. ಕ್ರೀಡೆಯಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುತ್ತದೆ. ಎಲ್ಲರೂ ನಿತ್ಯ ಜೀವನದಲ್ಲಿ ಕ್ರೀಡಾಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಆರ್‌ಡಿಪಿಆರ್ ನೌಕರರು, ಸಿಬ್ಬಂದಿ ನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಒತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿಯಾಗಿವೆ. ಎಲ್ಲ ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿ ಮೆರೆಯಬೇಕು. ಕ್ರೀಡಾಕೂಟದಿಂದ ಎಲ್ಲರೂ ಒಂದೆಡೆ ಸೇರಲು ಅವಕಾಶ ದೊರೆತಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯ ಅಲ್ಲ, ಪಾಲ್ಗೊಳ್ಳುವುದು ಪ್ರಮುಖವಾಗಿರುತ್ತದೆ ಎಂದರು.ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗಳ ಪಾತ್ರ ಬಹುಮುಖ್ಯ. ಹೀಗಾಗಿ ನೌಕರರು, ಸಿಬ್ಬಂದಿ ನಿತ್ಯದ ಕೆಲಸದ ಜೊತೆ ಬೆಳಗಿನ ಸಮಯದಲ್ಲಿ ಕ್ರೀಡಾಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲ ಆಗುತ್ತದೆ.
ಡಿಎಫ್‌ಒ ಕಾವ್ಯಾ ಚತುರ್ವೇದಿ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಜೀವನದಲ್ಲಿ ಶಿಸ್ತು, ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ ಎಂದರು.
ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.
೪ನೇ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕೆಲ ನೌಕರರು, ಸಿಬ್ಬಂದಿ ರಕ್ತದಾನ ಮಾಡಿದರು.