ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕ್ರೀಡೆಗಳು ವಿದ್ಯಾರ್ಥಿಗಳ ಮನೋವಿಕಸನಕ್ಕೆ ಸಹಕಾರಿ. ಸರ್ಕಾರ ಕಾಲೇಜು ಹಂತಗಳಲ್ಲಿ ಕ್ರೀಡಾ ಶಿಕ್ಷಕರನ್ನು ನೇಮಿಸಬೇಕು ಎಂದು ಶಾಸಕ ಎಚ್.ಟಿ.ಮಂಜು ಮನವಿ ಮಾಡಿದರು.ಪಟ್ಟಣದ ಬಿಜಿಎಸ್ ಕ್ರೀಡಾಂಗಣದಲ್ಲಿ ಕದಂಬ ಪಿಯು ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಹಲವು ಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುವ ಕ್ರೀಡೆಗಳಿಗೆ ಸರಿಯಾದ ಕ್ರೀಡಾಂಗಣಗಳ ವ್ಯವಸ್ಥೆಯಿಲ್ಲ. ಇದ್ದರೂ ನಿರ್ವಹಣೆ ಇಲ್ಲದೆ ಹಾಳಾಗಿತ್ತು. ಇದರಿಂದ ಕ್ರೀಡಾಪಟುಗಳಿಗೆ ನಿರಾಸೆಯಾಗಿತ್ತು ಎಂದರು.
ಕಳೆದ ಅಧಿವೇಶನದಲ್ಲಿ ನಾನು ಈ ಬಗ್ಗೆ ಪ್ರಸ್ತಾಪಿಸಿದ್ದು, ಪ್ರಸ್ತುತ ಕ್ರೀಡಾಂಗಣದ ನಿರ್ವಹಣೆ ಜವಾಬ್ದಾರಿ ಬದಲಾಯಿಸಲಾಗಿದೆ. ಬದಲಾದ ಗುತ್ತಿಗೆದಾರರು ಅತ್ಯುತ್ತಮವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಕ್ರೀಡಾ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪಟ್ಟಣದ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ದುಶ್ಚಟಗಳಿಂದಾಗಿ ವನತಿಯತ್ತ ಸಾಗುತ್ತಿದೆ. ಈ ಬಗ್ಗೆ ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಬೇಕು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ 400 ಮೀಟರ್ ಓಟವನ್ನು 53 ಸೆಕೆಂಡ್‌ಗಳಲ್ಲಿ ಪೂರೈಸಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕಿ ವಿಜಯಕುಮಾರಿ ಅವರನ್ನು ಶಾಸಕರು ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ಕದಂಬ ಪಿಯು ಕಾಲೇಜಿನ ಮುಖ್ಯಸ್ಥ ಡಿ.ಜೆ.ಕಿರಣ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಒಕ್ಕೂಟದ ಸಂಚಾಲಕ ಕೆ.ಮೋಹನ್, ಕೆಪಿಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಟಿ.ಪುಲಿಗೆರಯ್ಯ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೆಶಕ ಎಸ್.ಎಲ್.ಮೋಹನ್, ರಾಜ್ಯ ಉಪನ್ಯಾಸಕರ ಸಂಘದ ಅಧ್ಯಕ್ಷ ಡಿ.ಆರ್.ನಾಗೇಶ್, ಎಸ್.ಕೆ.ಚಿಕ್ಕಣ್ಣಗೌಡ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚಂದ್ರಮೋಹನ್, ಬಲ್ಲೇನಹಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜೆ.ಜಿ.ರಾಜೇಗೌಡ ಮತ್ತಿತರರು ಇದ್ದರು.
ಇಂದು ವಿದ್ಯುತ್ ವ್ಯತ್ಯಯಮಂಡ್ಯ: 66/11 ಕೆ.ವಿ ತಾಲೂಕಿನ ಬಸರಾಳು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 12 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಸರಾಳು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾವಿಸನಿನಿ, ಕಾ ಮತ್ತು ಪಾ ವಿಭಾಗ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಳೆ ವಿದ್ಯುತ್ ವ್ಯತ್ಯಯ
ಮಂಡ್ಯ: ತಾಲೂಕಿನ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಷುಗರ್ ಅರ್ಬನ್ ಫೀಡರ್, ಪಣಕನಹಳ್ಳಿ, ಗೊರವಾಲೆ ಎನ್.ಜೆ.ವೈ ಮಾರ್ಗ ಮತ್ತು ಸಂಪಹಳ್ಳಿ ಐ.ಪಿ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆ.13ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ನಗರ ಪ್ರದೇಶಗಳಾದ ಶಂಕರಪುರ, ಜೈನ್ ಸ್ಟ್ರೀಟ್, ಅಜಾದ್ ನಗರ, ಸಿಹಿನೀರು ಕೊಳ, ಕಾರೇಮನೆ ಗೇಟ್, ನಾಲಬಂದ್‌ವಾಡಿ, ಡೌರಿ ಸಮಾಜ, ಜಬರ್ ಸರ್ಕಲ್, ಹೊಳಲು ವೃತ್ತ, ಕಾಳಿಕಾಂಭ ದೇವಸ್ಥಾನ, ಮೈಷುಗರ್ ಕಾರ್ಖಾನೆ,
ಗ್ರಾಮಾಂತರ ಪ್ರದೇಶಗಳಾದ ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ, ಶಂಭೂನಹಳ್ಳಿ, ಕೋಣನಹಳ್ಳಿ, ಪಣಕನಹಳ್ಳಿ, ಹೊಳಲು, ಎಂ.ಜಿ. ಬಡಾವಣೆ, ತಂಡಸನಹಳ್ಳಿ, ಸಿದ್ದಯ್ಯನಕೊಪ್ಪಲು, ವೈ.ಯರಹಳ್ಳಿ , ಅವ್ವೇರಹಳ್ಳಿ, ಸಂಪಹಳ್ಳಿ ಐ.ಪಿ ಮಾರ್ಗ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಗರ, ಗ್ರಾಮಾಂತರ ಪ್ರದೇಶದಲ್ಲಿ ನಾಳೆ ವಿದ್ಯುತ್ ವ್ಯತ್ಯಯಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.
ನಗರ ಪ್ರದೇಶಗಳಆದ ಸುಭಾಷ್‌ನಗರ, ಆಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, NGO’S layout, , ಶ್ರೀ ರಾಮ ನಗರ, ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.