ದೇಹಕ್ಕೆ ಕ್ರೀಡೆ ವಿಟಮಿನ್ ಇದ್ದಂತೆ

KannadaprabhaNewsNetwork |  
Published : Sep 04, 2024, 01:52 AM IST
ಜಮಖಂಡಿಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜಮಖಂಡಿ ನಗರ ಪೂರ್ವ ವಲಯ ಮಟ್ಟದ ಕ್ರೀಡಾಕೂಟವನ್ನು ಬಿಇಒ ಎ.ಕೆ. ಬಸಣ್ಣವರ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭವಾರ್ತೆ ಜಮಖಂಡಿ: ಪರಿಪೂರ್ಣ ಆರೋಗ್ಯವಂತರಾಗಿರಲು ದೇಹಕ್ಕೆ ಎಲ್ಲ ತರಹದ ವಿಟಮಿನ್‌ಗಳು ಅಗತ್ಯ. ಆ ನಿಟ್ಟಿನಲ್ಲಿ ಕ್ರೀಡೆಗಳು ವಿಟಮಿನ್‌ನಂತೆ ಕೆಲಸ ಮಾಡುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಬಸವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗಳ ಆಶ್ರಯದಲ್ಲಿ ಆಯೋಜಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2024-25ನೇ ಸಾಲಿನ ಬಾಲಕ-ಬಾಲಕಿಯರ ಜಮಖಂಡಿ ನಗರ ಪೂರ್ವ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭವಾರ್ತೆ ಜಮಖಂಡಿ:

ಪರಿಪೂರ್ಣ ಆರೋಗ್ಯವಂತರಾಗಿರಲು ದೇಹಕ್ಕೆ ಎಲ್ಲ ತರಹದ ವಿಟಮಿನ್‌ಗಳು ಅಗತ್ಯ. ಆ ನಿಟ್ಟಿನಲ್ಲಿ ಕ್ರೀಡೆಗಳು ವಿಟಮಿನ್‌ನಂತೆ ಕೆಲಸ ಮಾಡುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಬಸವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗಳ ಆಶ್ರಯದಲ್ಲಿ ಆಯೋಜಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2024-25ನೇ ಸಾಲಿನ ಬಾಲಕ-ಬಾಲಕಿಯರ ಜಮಖಂಡಿ ನಗರ ಪೂರ್ವ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ, ಮತ, ಬಡವ, ಶ್ರೀಮಂತ, ಹೆಣ್ಣು ಮತ್ತು ಗಂಡು ಎಂಬ ತಾರತಮ್ಯಗಳನ್ನು ತೊಡೆದು ಹಾಕಲು ಕ್ರೀಡೆಗಳು ಸಹಾಯಕ. ಆದ್ದರಿಂದ ಮಕ್ಕಳು ಕ್ರೀಡಾಕೂದಲ್ಲಿ ಪಾಲ್ಗೊಂಡು ನಕ್ಕ-ನಲಿದು ಕ್ರೀಡಾಮನೋಭಾವ ಪ್ರದರ್ಶಿಸಬೇಕು ಎಂದು ಕಿವಿಮಾತು ಹೇಳಿದರು.ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಪಂಚಾಕ್ಷರಿ ಎಸ್.ನಂದೀಶ ಅತಿಥಿಯಾಗಿ ಮಾತನಾಡಿ, ನಿಜ ಜೀವನದ ಪಾಠ ಕಲಿಯಲು ಕ್ರೀಡೆಗಳು ಸಹಾಯಕ. ಆದ್ದರಿಂದ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಬೋಸ್ಲೆ ಮಾತನಾಡಿ, ಕ್ರೀಡೆಗಳಲ್ಲಿ ಸೋತವರು ಮನೋಬಲವನ್ನು ಕಳೆದುಕೊಳ್ಳದೆ ಮುಂದಿನ ಕ್ರೀಡಾಕೂಟಕ್ಕೆ ಅಣಿಯಾಗಬೇಕು ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಕಾಡೇಶ ಕೋಲೂರ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಿ.ಬೆಳ್ಳಿಕಟ್ಟಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಭೂಷಣ ಪತ್ತಾರ, ಸಿಆರ್‌ಪಿ ಎಂ.ಎಸ್.ನಾವಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ ಕಲ್ಲೋಳ್ಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಎನ್.ಎಲ್.ಮಿರ್ಜಿ, ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ ಇದ್ದರು. ಸಾಕ್ಷಿ ಸಂಕ್ರಾವತ ವಚನ ಪ್ರಾರ್ಥನೆ ಗೀತೆ ಹಾಡಿದರು. ಪ್ರಾಚಾರ್ಯ ಡಾ.ಟಿ.ಪಿ.ಗಿರಡ್ಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಮೌನೇಶ ಬಡಿಗೇರ ನಿರೂಪಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ