ಕ್ರೀಡೆಯೆಂಬುದು ಸ್ಪರ್ಧೆಯಲ್ಲ, ಆರೋಗ್ಯ ಕಾಪಾಡುವ ಅಸ್ತ್ರ: ಜಿಪಂ ಸಿಇಒ

KannadaprabhaNewsNetwork |  
Published : Mar 17, 2026, 02:30 AM IST
ಫೋಟೋವಿವರ- (16ಎಚ್‌ಪಿಟೆ7ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಕಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಉದ್ಘಾಟಿಸಿದರು | Kannada Prabha

ಸಾರಾಂಶ

ದೈನಂದಿನ ಕೆಲಸದ ಒತ್ತಡದಲ್ಲಿ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ.

ಹೊಸಪೇಟೆ: ಕ್ರೀಡೆಯೆಂದರೆ ಕೇವಲ ಸ್ಪರ್ಧೆಯಲ್ಲ, ಅದು ಆರೋಗ್ಯವನ್ನು ಕಾಪಾಡುವ ಒಂದು ಅಸ್ತ್ರವಾಗಿದೆ ಎಂದು ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಪಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗೆ ಏರ್ಪಡಿಸಿದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೈನಂದಿನ ಕೆಲಸದ ಒತ್ತಡದಲ್ಲಿ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ. ಆರೋಗ್ಯವಂತ ದೇಹದಲ್ಲಿ ಆರೋಗ್ಯಯುತವಾದ ಮನಸ್ಸು ನೆಲೆಸಿರುತ್ತದೆ ಎಂಬ ನಾಣ್ಣುಡಿಯಂತೆ ಸಿಬ್ಬಂದಿ ಸಹ ಸದೃಢವಾಗಿದ್ದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಕ್ರೀಡೆಯೆಂಬುವುದು ಸ್ಫೂರ್ತಿ, ಶಿಸ್ತು ಮತ್ತು ಆರೋಗ್ಯಕರ ಸ್ಪರ್ಧೆಯನ್ನು ತೋರಿಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ದಿನನಿತ್ಯ ಕೆಲಸದ ಒತ್ತಡದಲ್ಲಿ ದೈಹಿಕವಾಗಿ ಕುಗ್ಗಿರುತ್ತಾರೆ. ಕೆಲಸದ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ ಕ್ರೀಡೆ ಸಹಕಾರಿಯಾಗುವುದಲ್ಲದೇ ಪರಸ್ಪರ ಭಾಂದವ್ಯ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೃಹತ್ ಮಟ್ಟದಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು.

ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಎಸ್ಪಿ ಎಸ್. ಜಾಹ್ನವಿ, ಮುಖ್ಯ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಲೆಕ್ಕಾಧಿಕಾರಿ ರುದ್ರಪ್ಪ ಅಕ್ಕಿ, ತಾಪಂ ಇಒ ಆಲಂ ಬಾಷಾ ಉಪಸ್ಥಿತರಿದ್ದರು.

ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಉದ್ಘಾಟಿಸಿದರು.

ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ದಿನಾಚರಣೆ ಅಂಗವಾಗಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಟ್ಟೂರಲ್ಲಿ ನೀರಿದ್ದರೂ ಬಳಕೆಗೆ ತೀವ್ರ ಬರ
ಅಡುಗೆ ಅನಿಲ ಕೃತಕ ಅಭಾವ: ಮಾರ್ಕ್ಸ್‌ವಾದಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ