ಕನ್ನಡಪ್ರಭ ವಾರ್ತೆ ದೇವಲಾಪುರ
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಮನೋಸ್ಥೈರ್ಯ ಹೆಚ್ಚಾಗಿ ಕಲಿಕೆಗೆ ಆದ್ಯತೆ ನೀಡುತ್ತಾರೆ ಎಂದು ಬಿಇಒ ರವೀಶ್ ತಿಳಿಸಿದರು.ಇಲ್‌ಲಿನ ಕೆಪಿಎಸ್ಸಿ ಶಾಲೆ ಆವರಣದಲ್ಲಿ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಬಿಇಒ ಕಚೇರಿ, ದೈಹಿಕ ಶಿಕ್ಷಣ ವಿಭಾಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ವೃತ್ತದ ಶಿಕ್ಷಕರ ಆಶ್ರಯದಲ್ಲಿ ನಡೆದ 14 ವರ್ಷದೊಳಗಿನ ಬಾಲಕ- ಬಾಲಕಿಯರ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಕೇವಲ ಆಟವಲ್ಲ. ಸೋದರತ್ವದ ಭಾವನೆ, ಕ್ರೀಡೆ ಕಲಿಕೆ ಉತ್ಸಾಹ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಮಕ್ಕಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ತಮ್ಮ ಪ್ರತಿಭೆ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸ್ಪರ್ಧಾತ್ಮಕವಾಗಿ ಪಾಲ್ಗೊಂಡು ಯಶಸ್ವಿಗೆ ಶ್ರಮಿಸಬೇಕು. ಶಿಕ್ಷಣ ಚಿಂತನೆಯ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.
ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರವೀಶ್, ಶಾಲೆ ಮುಖ್ಯ ಶಿಕ್ಷಕ ಎನ್.ಸಿ.ಶಿವಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರವಿಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಮ್ಮ, ಹೋಬಳಿ ಶಿಕ್ಷಣ ಸಂಯೋಜಕರಾದ ಉಗ್ರೇಗೌಡ, ಶಿವಸ್ವಾಮಿ, ಸುರೇಶ್, ಬಿಆರ್ ಪಿ ವಿರೂಪಾಕ್ಷ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ವಿನಯ್ , ಶಿಕ್ಷಕರಾದ ಮಂಜೇಗೌಡ, ಪರಮೇಶ್ ಸೇರಿದಂತೆ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ, ಸದಸ್ಯರು, ಹೋಬಳಿಯ 22 ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಇದ್ದರು.ಇಂದು ಹಲವೆಡೆ ವಿದ್ಯುತ್ ವ್ಯತ್ಯಯ
ನಾಗಮಂಗಲ: ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್ ಪೋಸ್ಟ್‌ನ 220/66/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈ ಮಾಸಿಕ ವಿದ್ಯುತ್ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆ.21ರಂದು ಈ ಕೇಂದ್ರದಿಂದ ಹೊರಹೊಮ್ಮುವ ಕಾಲೇಜು ಎನ್‌ಜೆವೈ 11ಕೆವಿ ಮಾರ್ಗ ಸೇರಿದಂತೆ ನಾಗಮಂಗಲ ಪುರಸಭೆ ವ್ಯಾಪ್ತಿಯ ಬಳಪದಮಂಟಿಕೊಪ್ಪಲು, ಗದ್ದೇಭೂವನಹಳ್ಳಿ, ಬೀರೇಶ್ವರಪುರ, ಮುದ್ದೇಗೌಡನಕೊಪ್ಪಲು ಮತ್ತು ಕರಡಹಳ್ಳಿ ಗ್ರಾಪಂ ವ್ಯಾಪ್ತಿಯ ಹುಲ್ಲೇಕೆರೆ, ಹೊಸಕೊಪ್ಪಲು, ಗುಂಡುಕಲ್ಲುಹೊಸೂರು, ತಟ್ಟಹಳ್ಳಿ, ಹರಳಕೆರೆ, ದಂ.ಜಕ್ಕನಹಳ್ಳಿ, ಕಲ್ಲಿನಾಥಪುರ ಮತ್ತು ದಂಡಿಗನಹಳ್ಳಿ ಗ್ರಾಮಗಳಿಗೆ ಬೆಳಗ್ಗೆ 10 ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಈ ಭಾಗದ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಎಇಇ ತಿಲಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.