ಕನ್ನಡಪ್ರಭ ವಾರ್ತೆ ಹಿರಿಯೂರು
ನಗರದ ತಾಲೂಕು ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಆರೋಗ್ಯ, ಶಿಸ್ತು, ನಾಯಕತ್ವ ಗುಣ ಬೆಳೆಸುವ ಮಾರ್ಗವಾಗಿವೆ.ಈ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಸದೃಢ ಭವಿಷ್ಯದ ನಿರ್ಮಾಣಕ್ಕೆ ದಾರಿಯಾಗುತ್ತವೆ.ವಿದ್ಯಾರ್ಥಿಗಳು ಗ್ರಾಮೀಣ ಭಾಗದಿಂದ ರಾಜ್ಯ ಮಟ್ಟದವರೆಗೆ ಕ್ರೀಡಾಕೂಟದಲ್ಲಿ ಗುರುತಿಸಿಕೊಂಡು ತಾಲೂಕಿಗೆ ಕೀರ್ತಿ ತರಬೇಕು ಎಂದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಾಲೇಜು ಉಪ ನಿರ್ದೇಶಕ ಕೆ.ತಿಮ್ಮಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ನಾಯ್ಕ್, ನಗರಸಭೆ ಪೌರಾಯುಕ್ತ ಎ.ವಾಸಿಂ,ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂಡಿ ಸಣ್ಣಪ್ಪ, ಮಮತಾ, ಮುಖಂಡ ಜ್ಞಾನೇಶ್,ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಆರ್.ತಿಪ್ಪೇಸ್ವಾಮಿ, ತಾಲೂಕು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಹಲವರು ಇದ್ದರು.