ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

KannadaprabhaNewsNetwork |  
Published : Nov 29, 2026, 02:45 AM IST
ಫೋಟೋವಿವರ- (27ಎಚ್‌ಪಿಟಿ2) ಹೊಸಪೇಟೆ ನಗರದ ಡಿಎಆರ್ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉದ್ಘಾಟಿಸಿದರು. ಎಸ್‌ಪಿ. ಎಸ್‌. ಜಾಹ್ನವಿ ಸೇರಿದಂತೆ ಇತರರು ಉಪಸ್ಥಿತರಿದ್ದರು | Kannada Prabha

ಸಾರಾಂಶ

ಪೊಲೀಸ್ ಇಲಾಖೆಯು ಶಿಸ್ತು ಮತ್ತು ಕರ್ತವ್ಯನಿಷ್ಠೆಗೆ ಹೆಸರುವಾಸಿಯಾಗಿದೆ. ಪೊಲೀಸರು ಹಗಲು-ರಾತ್ರಿ ಎನ್ನದೆ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡುತ್ತಿದ್ದಾರೆ

ಹೊಸಪೇಟೆ: ಕ್ರೀಡೆಗಳು ಮನುಷ್ಯನ ದೈಹಿಕ ಸದೃಢತೆಯ ಜತೆಗೆ ಮಾನಸಿಕ ಆರೋಗ್ಯ, ಉಲ್ಲಾಸ ಮತ್ತು ಚೈತನ್ಯ ಹೆಚ್ಚಿಸುತ್ತವೆ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಹಾಗೂ ಕ್ರೀಡಾಸ್ಫೂರ್ತಿ ಮುಖ್ಯ. ಹೀಗಾಗಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವದೊಂದಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯು ಶಿಸ್ತು ಮತ್ತು ಕರ್ತವ್ಯನಿಷ್ಠೆಗೆ ಹೆಸರುವಾಸಿಯಾಗಿದೆ. ಪೊಲೀಸರು ಹಗಲು-ರಾತ್ರಿ ಎನ್ನದೆ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡುತ್ತಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಾರ್ವಜನಿಕರು ಮೊದಲು ಪೊಲೀಸರ ನೆರವು ಕೋರುತ್ತಾರೆ. ಅಂತಹ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತಾರೆ. ಸಮಾಜದ ನೆಮ್ಮದಿಯ ಹಿಂದೆ ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆ ಮತ್ತು ಕರ್ತವ್ಯ ನಿಷ್ಠೆ ಮಹತ್ವದ ಪಾತ್ರ ವಹಿಸುತ್ತಿದೆ. ಪೊಲೀಸ್ ಸಿಬ್ಬಂದಿಯ ಸೇವೆ ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.

ಪ್ರಸ್ತುತ ಸರ್ಕಾರಿ ಇಲಾಖೆಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದು, ವೈಯಕ್ತಿಕ ಜೀವನಕ್ಕೂ ಸಮಯ ನೀಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದರಲ್ಲೂ ಪೊಲೀಸ್ ಸಿಬ್ಬಂದಿ ನಿರಂತರ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಒತ್ತಡದಿಂದ ಹೊರಬಂದು ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಕ್ರೀಡೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಉಲ್ಲಾಸ ಮತ್ತು ಚೈತನ್ಯ ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಾರ್ಷಿಕ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕ್ರೀಡೆಯಲ್ಲಿ ಗೆದ್ದವರು ಅಹಂಕಾರ ಪಡದೆ ಸೋತವರು ನಿರಾಶರಾಗದೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಕ್ರೀಡೆಯ ನಿಜವಾದ ಮೌಲ್ಯ ಅರಿತುಕೊಳ್ಳಬೇಕು. ಎಲ್ಲ ತಂಡಗಳು ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌.ಜಾಹ್ನವಿ, ಡಿವೈಎಸ್ಪಿ ಪಿ.ಮುರಳೀಧರ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅವಕಾಶವನ್ನು ಬಳಸಿಕೊಳ್ಳುವ ಚಾಕಚಕ್ಯತೆ ವಿದ್ಯಾರ್ಥಿಗಳಲ್ಲಿರಬೇಕು: ಕ್ಯಾ. ಚೌಟ
ಆನೆ ದಾಳಿ ಸಮಸ್ಯೆ: ರಾಮಲಿಂಗ ರೆಡ್ಡಿ ಜೊತೆ ಕೋಟ ಚರ್ಚೆ