ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ

KannadaprabhaNewsNetwork |  
Published : May 03, 2026, 01:45 AM IST
2ಎಚ್ಎಸ್‌ಎನ್12 :  | Kannada Prabha

ಸಾರಾಂಶ

ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಶಿಸ್ತು, ಸಹನಶೀಲತೆ ಹಾಗೂ ತಂಡದ ಭಾಗವಾಗಿ ಆಡುವ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸಿಗೆ ಪೂರಕವಾಗುವ ಗುಣಗಳನ್ನು ರೂಪಿಸುತ್ತದೆ ಎಂದು ಹೇಳಿದರು. ಕ್ರೀಡಾ ಚಟುವಟಿಕೆಗಳ ಮೂಲಕ ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ, ಸಹಕಾರ ಮನೋಭಾವ ಹಾಗೂ ಸವಾಲುಗಳನ್ನು ಎದುರಿಸುವ ಧೈರ್ಯ ವಿದ್ಯಾರ್ಥಿಗಳಲ್ಲಿ ಬೆಳೆಯುತ್ತದೆ. ವಿದ್ಯಾಭ್ಯಾಸದ ಜೊತೆಗೆ ದೈಹಿಕ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ಮಲೆನಾಡುತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಅಮರೇಂದ್ರ ಎಚ್.ಜೆ. ಅವರು ಅಭಿಪ್ರಾಯಪಟ್ಟರು.ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಶಿಸ್ತು, ಸಹನಶೀಲತೆ ಹಾಗೂ ತಂಡದ ಭಾಗವಾಗಿ ಆಡುವ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸಿಗೆ ಪೂರಕವಾಗುವ ಗುಣಗಳನ್ನು ರೂಪಿಸುತ್ತದೆ ಎಂದು ಹೇಳಿದರು. ಕ್ರೀಡಾ ಚಟುವಟಿಕೆಗಳ ಮೂಲಕ ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ, ಸಹಕಾರ ಮನೋಭಾವ ಹಾಗೂ ಸವಾಲುಗಳನ್ನು ಎದುರಿಸುವ ಧೈರ್ಯ ವಿದ್ಯಾರ್ಥಿಗಳಲ್ಲಿ ಬೆಳೆಯುತ್ತದೆ. ವಿದ್ಯಾಭ್ಯಾಸದ ಜೊತೆಗೆ ದೈಹಿಕ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಬೇಕು ಎಂದರು.ಕಾರ್ಯಕ್ರಮದ ಅಂಗವಾಗಿ ವಿವಿಧ ವಿಭಾಗಗಳು ಹಾಗೂ ಕ್ಲಬ್‌ಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಷಯಗಳಿಗೆ ಸಂಬಂಧಿಸಿದ ಡೀನ್ಪ್ರೊ, ಇಂದಿರಾ ಬಹದ್ದೂರ್‌, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಜನತೆ ರೇಷ್ಮೆ ಕೃಷಿಯಲ್ಲಿ ತೊಡಗಿಕೊಳ್ಳಿ: ಸಿಎಂ
...ಚೇಳೂರಿಗೆ ಡಿಸಿ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ