ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಅವರು ಆಲೂರುಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡೋತ್ಸವ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಮತ್ತು ಕಲೆ ಶಿಕ್ಷಣದ ಭಾಗವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ದೃಢತೆಯನ್ನು ಹೆಚ್ಚಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್ ಮಾತನಾಡಿ, ಕ್ರೀಡೆಯಿಂದ ದೈಹಿಕ ಆರೋಗ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಯಿಂದ ಮಾನಸಿಕ ಆರೋಗ್ಯವು ಸುಧಾರಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳಲ್ಲಿರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತ್ ಮೂಲಕ ಕ್ರೀಡೋತ್ಸವ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.