ಶ್ರೀರಂಗಪಟ್ಟಣ: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿಯ ಮಾನಸಿಕ ಸಾಮರ್ಥ್ಯದ ವೃದ್ಧಿಗೆ ಸಹಕಾರಿಯಾಗಿವೆ ಎಂದು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿಗೆ ಸ್ವಾಗತ ಕೋರಿ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಮನುಷ್ಯನ ದೇಹ ವಿಕಸನವಾಗುತ್ತದೆ ಎಂದರು.
ಪೋಷಕರು ತಮ್ಮ ಮಕ್ಕಳನ್ನು ಓದು ಮತ್ತು ಬರಹಕ್ಕೆ ಸೀಮಿತಗೊಳಿಸದೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸುವ ಅಗತ್ಯವಿದೆ ಎಂದರು.ತಾಪಂ ಇಒ ವೇಣು ಮಾತನಾಡಿ, ಶಿಕ್ಷಕರ ಆದರ್ಶ ನಡೆಗಳು ಮಕ್ಕಳ ಮೇಲೆ ಪ್ರಭಾವ ಬೀರಿ ಕಲಿಕಾ ಮಟ್ಟದಲ್ಲಿ ಚೇತರಿಕೆ ಕಾಣುತ್ತದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಎಲ್ಲರೂ ಭಾಗವಹಿಸಿ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ಬಿಆರ್‌ಸಿ ಡಾ.ಪ್ರಭ ನಂಜಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಪಾಳ್ಯ ಲೋಕೇಶ್, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಚೆನ್ನಕೃಷ್ಣಯ್ಯ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಡಿ ರಮೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮು, ವಿದ್ಯಾ ಇಲಾಖೆ ನೌಕರ ಸಂಘದ ಅಧ್ಯಕ್ಷ ಟಿ.ಪಿ.ಕುಮಾರ್, ಕಾರ್ಯದರ್ಶಿ ರಾಘವೇಂದ್ರ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ತಿಮ್ಮೇಗೌಡ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಯ ಶಂಕರಪ್ಪ, ಇಸಿಓ ನಂಜುಂಡಚಾರಿ, ಸಿಆರ್‌ಪಿ ರಮೇಶ್, ಶಿಕ್ಷಕರಾದ ನಾಗರಾಜು, ಶ್ರೀನಿವಾಸಚಾರಿ ಸೇರಿದಂತೆ ಇತರರು ಹಾಜರಿದ್ದರು.ಶಿಕ್ಷಕರು ಗುಂಪು ಕ್ರೀಡೆಗಳು, ವೈಯಕ್ತಿಕ ಕ್ರೀಡೆಗಳು ಹಾಗೂ ನಾಟಕ, ಚರ್ಚಾ ಸ್ಪರ್ಧೆ, ಭಕ್ತಿ ಗೀತೆ ಜನಪದ ಗೀತೆ, ಭಾವಗೀತೆ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು.