ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖಾಧಿಕಾರಿ ವಿಮಲ ಮಾತನಾಡಿ, ಅಂಗವಿಕಲರಲ್ಲಿರುವ ವಿಶೇಷ ಚೇನತವನ್ನು ಹೊರ ತರಲು ಕ್ರೀಡೆ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮಕ್ಕೆ ರೋಟರಿ ಸಂಸ್ಥೆ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಚಾಲನೆ ನೀಡಿ ಮಾತನಾಡಿ, ಅಂಗವಿಕಲರನ್ನು ಸಮಾಜದಲ್ಲಿ ಎಲ್ಲರಂತೆ ಕಾಣಬೇಕಿದೆ. ಅಂಗವಿಕಲರ ಕಲ್ಯಾಣಕ್ಕಾಗಿ ಎಲ್ಲರೂ ತಮ್ಮ ದುಡಿಮೆಯಲ್ಲಿ ಅಲ್ಪ ಭಾಗವನ್ನಾದರೂ ನೀಡುವ ಮೂಲಕ ಸವಲತ್ತುಗಳನ್ನು ನೀಡಲು ಸಹಕರಿಸಬೇಕೆಂದು ಮನವಿ ಮಾಡಿದರು.ಆಯುರ್ವೇದ ಆಸ್ಪತ್ರೆಯ ವೈದ್ಯ ಶ್ವೇತಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಸುಕುಮಾರಿ, ತಾಲೂಕು ಅಂಗವಿಕಲರ ಸಂಘದ ಅದ್ಯಕ್ಷ ಸಂಗಮೇಶ್, ವಿವೇಕಾನಂದ ಯೂತ್ ಮೂವ್‌ಮೆಂಟ್ ತಾಲೂಕು ಅಧ್ಯಕ್ಷೆ ಸುನಿತಾ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಂಗೀತಾ ದಿನೇಶ್, ನಾವು ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಗೌತಮ್, ಶನಿವಾರಸಂತೆ ಸನ್ನಧಿ ಶಾಲೆಯ ವ್ಯವಸ್ಥಾಪಕ ನಿರಂಜನ್ ಇದ್ದರು.
ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಆಯುವೇರ್ವೇದ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಿಸಲಾಯಿತು.