ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ತಾಲೂಕಿನ ಪದವಿ ಪೂರ್ವ ಹಾಗೂ ಅಂತರ ಕಾಲೇಜುಗಳ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಜಾನಪದ ಗೀತಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪಾಠ- ಪ್ರವಚನದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ವಿಕಸನಗೊಳಿಸಿಕೊಂಡು ಸಾಧನೆ ಮಾಡಬೇಕೆಂದು ಕರೆ ನೀಡಿದರು.ವಿದ್ಯಾರ್ಥಿಗಳು ಹಾಗೂ ಯುವಜನರು ಟಿವಿ ಹಾಗೂ ದೃಶ್ಯ ಮಾಧ್ಯಮಗಳ ಹಾವಳಿಯಿಂದ ಮತ್ತು ಮೊಬೈಲ್ ಪೋನ್ ಮೋಹದಿಂದ ಸಾರ್ವಜನಿಕರು ಹಾಗೂ ಬಂಧುಗಳೊಂದಿಗೆ ಮುಕ್ತವಾಗಿ ಬೆರೆಯದೇ ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿ ತಮ್ಮದೇ ಪ್ರಪಂಚದಲ್ಲಿ ವಿಹಾರ ಮಾಡುತ್ತಾ ಅನಾಥ ಪ್ರಜ್ಞೆಯಿಂದ ಬಳಲುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ವೇಳೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಜಯಕೀರ್ತಿ, ತೆಂಡೇಕೆರೆ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್, ಕಾಲೇಜಿನ ಹಿರಿಯ ವ್ಯವಸ್ಥಾಪಕ ಬಿ.ಎ. ಮಂಜುನಾಥ್ ಸೇರಿ ಕಾಲೇಜಿನ ಸಹ ಪ್ರಾಧ್ಯಾಪಕರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಭಾಗವಹಿಸಿದ್ದರು.
14ಕೆಎಂಎನ್ ಡಿ19