ಕುಟುಂಬಗಳನ್ನು ಬೆಸೆಯಲು ಕ್ರೀಡಾಕೂಟ ಸಹಕಾರಿ: ಸುಮಿತ್ರ ನಿಂಗರಾಜು

KannadaprabhaNewsNetwork |  
Published : May 03, 2026, 02:45 AM IST
 | Kannada Prabha

ಸಾರಾಂಶ

ಕೊಡಗು ಗೌಡ ಯುವ ವೇದಿಕೆ ವತಿಯಿಂದ ೧೦ ಕುಟುಂಬ ೧೮ ಗೋತ್ರದ ಗೌಡ ಕುಟುಂಬಗಳಿಗೆ ನಡೆಯುತ್ತಿರುವ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಗೆ ಹಾಸನದ ಅಬಕಾರಿ ಇಲಾಖೆ ಉಪ ಆಯುಕ್ತ ನಂಗಾರು ಸುಮಿತ್ರ ನಿಂಗರಾಜು ಚಾಲನೆ ನೀಡಿದರು.

ಮಡಿಕೇರಿ: ಕೊಡಗು ಗೌಡ ಯುವ ವೇದಿಕೆ ವತಿಯಿಂದ ೧೦ ಕುಟುಂಬ ೧೮ ಗೋತ್ರದ ಗೌಡ ಕುಟುಂಬಗಳಿಗೆ ನಡೆಯುತ್ತಿರುವ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಗೆ ಹಾಸನದ ಅಬಕಾರಿ ಇಲಾಖೆ ಉಪ ಆಯುಕ್ತ ನಂಗಾರು ಸುಮಿತ್ರ ನಿಂಗರಾಜು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪಂದ್ಯಾವಳಿಗೆ ಉತ್ತಮ ಸ್ಪಂದನೆ ದೊರಕಿರುವುದು ಸಂತೋಷದ ವಿಚಾರ. ಎಲ್ಲ ಕುಟುಂಬಗಳನ್ನು ಬೆಸೆಯಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಹಿರಿಯರು ಕಿರಿಯರು ಎನ್ನುವ ಭೇದ ಬಾವವಿಲ್ಲದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಪಂದ್ಯಾವಳಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭ ಕೊಡಗು ಗೌಡ ಯುವ ವೇದಿಕೆ ಆಡಳಿತ ಮಂಡಳಿ ಹಾಗೂ ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ನಡುವೆ ಉದ್ಘಾಟನಾ ಪಂದ್ಯ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಾರ್ಯನಿರತ ಪತ್ರಕರ್ತರ ಸಂಘ ಐದು ಓವರ್ ಗಳಲ್ಲಿ ನಾಲ್ಕು ವಿಕೇಟ್ ನಷ್ಟಕೆ ೮೪ ರನ್ ಕಲೆ ಹಾಕಿತ್ತು. ಬಳಿಕ ಬ್ಯಾಟ್ ಮಾಡಿದ ಕೊಡಗು ಗೌಡ ಯುವ ವೇದಿಕೆ ತಂಡ ಐದು ಓವರ್ ಗಳಲ್ಲಿ ನಾಲ್ಕು ವಿಕೇಟ್ ನಷ್ಟಕ್ಕೆ ಕೇವಲ ೬೬ ರನ್ ಗಳಿಸುವ ಮೂಲಕ ಸೋಲು ಅನುಭವಿಸಿತು. ಆ ಮೂಲಕ ಪ್ರದರ್ಶನ ಪಂದ್ಯದಲ್ಲಿ ಕೊಡಗು ಕಾರ್ಯನಿರತ ಪತ್ರಕರ್ತರ ಸಂಘ ೧೮ ರನ್ ಭರ್ಜರಿ ಗೆಲವನ್ನು ಸಾಧಿಸಿತು.

ಕಾರ್ಯಕ್ರಮದಲ್ಲಿ ಗೌಡ ಯುವ ವೇದಿಕೆಯ ಅಧ್ಯಕ್ಷ ಬಾಲಡಿ ಮನೋಜ್, ಪ್ರಧಾನ ಕಾರ್ಯದರ್ಶಿ ಪುದಿನೆರವನ ರಿಷಿತ್ ಮಾದಯ್ಯ, ಉಪಾಧ್ಯಕ್ಷ ಎಡಿಕೇರಿ ಪ್ರಸನ್ನ ಸೇರಿದಂತೆ ಗೌಡ ಯುವ ವೇದಿಕ ಪ್ರದಾಧಿಕಾರಿಗಳು ಸದಸ್ಯರು ಹಾಗೂ ವಿವಿಧ ಬಾಗದಿಂದ ಆಗಮಿಸಿದ ಗೌಡ ಕುಟುಂಬದ ಕ್ರೀಡಾಪಟುಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ