ಇಲ್ಲಿನ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರೀಮಂಜೇಶ್ವರ ಇವರ ಸಂಯುಕ್ತ ಆಸರೆಯಲ್ಲಿ ಖೇಲೋ ಜನತಾ-ವಾರ್ಷಿಕ ಕ್ರೀಡಾಕೂಟ 2026 ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು
ಹೆಮ್ಮಾಡಿ : ಇಲ್ಲಿನ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರೀಮಂಜೇಶ್ವರ ಇವರ ಸಂಯುಕ್ತ ಆಸರೆಯಲ್ಲಿ ಖೇಲೋ ಜನತಾ-ವಾರ್ಷಿಕ ಕ್ರೀಡಾಕೂಟ 2026 ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು
ಅಧ್ಯಕ್ಷತೆ ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕ್ರೀಡಾ ಸಾಧನೆಗೈದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಂಡಿದ್ದೇ ಎಂದರು.ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದ ಬೈಂದೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಫದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಚೈತನ್ಯವಾಗಿ ಇರಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಪತ್ರಕರ್ತ ಅರುಣ್ ಕುಮಾರ್ ಶಿರೂರು ಕ್ರೀಡಾ ಜ್ಯೋತಿ ಬೆಳಗಿಸಿದರು. ವಂಡ್ಸೆ ನೆಂಪು ಕೆ.ಪಿ.ಎಸ್.ನ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ದ್ವಜಾರೋಹಣ ನೆರವೇರಿಸಿದರು. ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಇದ್ದರು.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರೀಮಂಜೇಶ್ವರದ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ, ಶಿಕ್ಷಕಿ ಶಾಂಭವಿ ಪಥ ಸಂಚಲನ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ್ ವಂದಿಸಿ. ಉಪನ್ಯಾಸರಾದ ಉದಯ ನಾಯ್ಕ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.