ಕ್ರೀಡಾಕೂಟಗಳು ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ನಾಪೋಕ್ಲು: ಕ್ರೀಡಾಕೂಟಗಳು ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಪಾರಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪಾರಾಣೆ ಕ್ರೀಡಾ ಹಬ್ಬ - 2026 ಹಾಗೂ ಅಂತರ್ ಗ್ರಾಮಾಂತರ ಕೈಲ್ ಮೂರ್ತ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೊಡಗಿನ ಕ್ರೀಡಾಪಟುಗಳು ದೇಶದಲ್ಲಷ್ಟೇ ಅಲ್ಲದೆ ವಿಶ್ವಮಟ್ಟದಲ್ಲೂ ಉತ್ತಮ ಹೆಸರು ಗಳಿಸುತ್ತಿದ್ದು, ಅನೇಕ ಪದಕಗಳನ್ನು ತಮ್ಮ ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಕೊಡಗಿನ ಜನತೆ ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿದವರಾಗಿದ್ದು, ಕ್ರೀಡಾಪಟುಗಳು ಕ್ರೀಡೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದರೆ, ಅದು ಅವರ ಉಜ್ವಲ ಭವಿಷ್ಯವನ್ನು ರೂಪಿಸಲು ದೊಡ್ಡ ಮಟ್ಟದಲ್ಲಿ ನೆರವಾಗಲಿದೆ ಎಂದರು.
ಪಾರಣೆ ಕೇಂದ್ರ ಕ್ರೀಡಾ ಮಂಡಳಿಯ ಅಧ್ಯಕ್ಷ ಎಂ., ಸಾಬ ದೇವಯ್ಯ ಅಧ್ಯಕ್ಷತೆ ವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.