ಹುಬ್ಬಳ್ಳಿ: ಮಕ್ಕಳನ್ನು ಮಾನಸಿಕ, ಶಾರೀರಿಕವಾಗಿ ಸದೃಢರನ್ನಾಗಿಸಲು ಇಂತಹ ಕ್ರೀಡಾ ಉತ್ಸವಗಳು ಸಹಕಾರಿಯಾಗಲಿವೆ. ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನೆಲ್ಲ ಸುಧಾರಣೆ ಮಾಡಬಹುದು ಎಂಬುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾದರಿ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ರಾಜಸ್ಥಾನ, ಗುಜರಾತ್‌ಗೆ ಸೀಮಿತವಾಗಿದ್ದ ಗಾಳಿಪಟ ಉತ್ಸವವನ್ನು ಹುಬ್ಬಳ್ಳಿಗೆ ತಂದ ಕೀರ್ತಿ ಜೋಶಿ ಅವರಿಗೆ ಸಲ್ಲುತ್ತದೆ ಎಂದರು.
ಸರ್ದಾರ ವಲ್ಲಭಭಾಯಿ ಅವರು ಭಾರತದಲ್ಲಿ ಜನ್ಮ ತಳಿಯದಿದ್ದರೆ ಇಂದು ಭಾರತದ ಸ್ಥಿತಿಯನ್ನು ಊಹಿಸಿಕೊಳ್ಳಲೂ ಸಾಧ್ಯವಿರಲಿಲ್ಲ. ಹೀಗಾಗಿ, ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯಲಾಗುತ್ತದೆ ಎಂದ ಅವರು, ಉತ್ತಮವಾಗಿ ಚಿತ್ರ ಬಿಡಿಸಿದವರಿಗೆ ಅವ್ವ ಸೇವಾ ಟ್ರಸ್ಟ್ ವತಿಯಿಂದ ಬಹುಮಾನ ನೀಡುವುದಾಗಿ ಘೋಷಿಸಿದರು.ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ನಾಡಿನ ಸಂಸ್ಕೃತಿ, ಪರಂಪರೆ ಮತ್ತು ದೇಸಿ ಕ್ರೀಡೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಸತತವಾಗಿ ಗಾಳಿಪಟ ಮತ್ತು ಸಾಂಸ್ಕೃತಿಕ ಉತ್ಸವ ನೆರವೇರಿಸಲಾಗುತ್ತಿದೆ. ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು
ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ವಿಪ ಸದಸ್ಯ ಪ್ರದೀಪ ಶೆಟ್ಟರ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚೌಹಾಣ, ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಸ್ವರ್ಣ ಸಮೂಹ ಸಂಸ್ಥೆಗಳ ಎಂಡಿ ಡಾ. ವಿ.ಎಸ್.ವಿ. ಪ್ರಸಾದ, ಮಾಜಿ ಶಾಸಕ ಅಶೋಕ ಕಾಟವೆ, ಸೀಮಾ ಮಸೂತಿ ಸೇರಿ ಹಲವರಿದ್ದರು.ಸಾವಿರಾರು ವಿದ್ಯಾರ್ಥಿಗಳು ಭಾಗಿಸಭಾ ಕಾರ್ಯಕ್ರಮ ನಂತರ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ನೆರವೇರಿತು. 70ಕ್ಕೂ ಅಧಿಕ ಶಾಲೆಗಳಿಂದ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಚಿತ್ರಕಲಾ ಸ್ಪರ್ಧೆಗೆ ಬಿಜೆಪಿ ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಚಾಲನೆ ನೀಡಿದರು. ಸಂಸದ ಕ್ರೀಡಾ ಮಹೋತ್ಸವದ ಲೋಕಸಭಾ ಮಟ್ಟದ ದೇಸಿ ಕ್ರೀಡೆಗಳಿಗೆ ಶಾಸಕ ಎಂ.ಆರ್. ಪಾಟೀಲ ಹಾಗೂ ಮಹಿಳಾ ಕ್ರೀಡೆಗಳಿಗೆ ಮೇಯರ್ ಜ್ಯೋತಿ ಪಾಟೀಲ ಚಾಲನೆ ನೀಡಿದರು. ಮಧ್ಯಾಹ್ನದ ಬಳಿಕ ಸಂಸದ ಕ್ರೀಡಾ ಮಹೋತ್ಸವದ ಅಂಗವಾಗಿ ಲೋಕಸಭಾ ಮಟ್ಟದ ದೇಸಿ ಕ್ರೀಡೆಗಳಾದ ಯೋಗ, ಮಲ್ಲಕಂಬ, ಗೋಲಿ ಆಟ, ಲಗೋರಿ, ಹಗ್ಗ ಜಗ್ಗಾಟ, ಚಿನ್ನಿ-ದಾಂಡು ಸ್ಪರ್ಧೆಗಳು ನೆರವೇರಿದವು.