ಕ್ರೀಡೆಯಿಂದ ಸೋಲು ಗೆಲುವು ಸಮಾನ ಸ್ವೀಕಾರ ಮನೋಭಾವ: ಡಾ. ಅಶೋಕ್ ಕಾಮತ್

KannadaprabhaNewsNetwork |  
Published : Nov 05, 2026, 02:45 AM IST
17 ವರ್ಷದೊಳಗಿನ ಬಾಲಕ–ಬಾಲಕಿಯರ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಚಾಲನೆ | Kannada Prabha

ಸಾರಾಂಶ

ಕ್ರೀಡೆಯು ಸೋಲನ್ನು ಸ್ವೀಕರಿಸುವ ಹಾಗೂ ಸವಾಲುಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸುತ್ತದೆ. ಜೀವನದಲ್ಲೂ ಇದೇ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಹೇಳಿದರು.

ಕಾರ್ಕಳ: ಕ್ರೀಡೆಯು ಸೋಲನ್ನು ಸ್ವೀಕರಿಸುವ ಹಾಗೂ ಸವಾಲುಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸುತ್ತದೆ. ಜೀವನದಲ್ಲೂ ಇದೇ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಹೇಳಿದರು.ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ 17 ವರ್ಷದೊಳಗಿನ ಬಾಲಕ–ಬಾಲಕಿಯರ ರಾಜ್ಯಮಟ್ಟದ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಮಾತನಾಡಿ, ಚೆಸ್ ಮನಸ್ಸು ಮತ್ತು ಬುದ್ಧಿಯ ಸಮನ್ವಯದ ಕ್ರೀಡೆಯಾಗಿದೆ ಎಂದರು. ರಾಜ್ಯಮಟ್ಟದ ಪಂದ್ಯಾಟವನ್ನು ಯಶಸ್ವಿಯಾಗಿ ಸಂಘಟಿಸಿದ ಸಂಘಟಕರು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಅವರು ಅಭಿನಂದಿಸಿದರು.ಕ್ರೀಡೆ ಜೀವನದ ಅಂಗ: ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕುಮಾರ್ ಶೆಟ್ಟಿ ಮಾತನಾಡಿ, ಚೆಸ್ ಬುದ್ಧಿಗೆ ವ್ಯಾಯಾಮ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಚತುರರನ್ನಾಗಿಸುತ್ತದೆ. ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದಲ್ಲೂ ಮಿಂಚುವಂತಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಮಾತನಾಡಿ, ಅಂಕಗಳು ಮಾತ್ರ ಜೀವನವನ್ನು ನಿರ್ಧರಿಸುವುದಿಲ್ಲ. ಶಿಸ್ತು, ಸಹನೆ, ತಾಳ್ಮೆ ಹಾಗೂ ನಿರಂತರ ಪರಿಶ್ರಮದಿಂದ ಮಾತ್ರ ಸಾಧನೆಯ ಶಿಖರಕ್ಕೇರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ವೇದಿಕೆಯಲ್ಲಿ ಕಾರ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಗಿರಿಜಮ್ಮ ಎಸ್.ಆರ್., ಉಮಾನಾಥ ಕಾಪು, ಚೆಸ್ ಅಸೋಸಿಯೇಷನ್ ಅಧ್ಯಕ್ಷರು, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ವಿವಿಧ ತಾಲೂಕುಗಳ ಟಿ.ಪಿ.ಇ.ಒ.ಗಳಾದ ಸತ್ಯನಾರಾಯಣ, ರವೀಂದ್ರ ನಾಯಕ್ ಹಾಗೂ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ. ಸ್ವಾಗತಿಸಿದರು. ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಕುಮಾರಿ ದರ್ಶಿನಿ ನಿರೂಪಿಸಿದರು. ವಿದ್ಯಾರ್ಥಿನಿ ಅವನಿ ಕುಡ್ವ ಪ್ರಾರ್ಥಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ