ಕ್ರೀಡೆಯಿಂದ ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ವೃದ್ಧಿ

KannadaprabhaNewsNetwork |  
Published : Nov 28, 2026, 02:45 AM IST
ಮುದ್ದೇಬಿಹಾಳ | Kannada Prabha

ಸಾರಾಂಶ

ಮಕ್ಕಳನ್ನು ಶೈಕ್ಷಣಿಕವಾಗಿ ಸದೃಢಗೊಳಿಸುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರನ್ನಾಗಿಸಲು ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ ಅಲ್ಲದೇ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದು ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮಕ್ಕಳನ್ನು ಶೈಕ್ಷಣಿಕವಾಗಿ ಸದೃಢಗೊಳಿಸುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರನ್ನಾಗಿಸಲು ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ ಅಲ್ಲದೇ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದು ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಹೇಳಿದರು.

ತಾಲೂಕಿನ ಹಡಲಗೇರಿ ವ್ಯಾಪ್ತಿಯ ಬಿಎಎಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಗುರುವಾರ ಜರುಗಿದ 2ನೇ ವಾರ್ಷಿಕ ಕ್ರೀಡೋತ್ಸವವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಶಾಲೆಯನ್ನು ಆರಂಭಿಸಿ, ಸ್ಥಳೀಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ. ಇಂತಹ ಶಿಕ್ಷಣ ಸಂಸ್ಥೆಗಳು ಇನ್ನಷ್ಟು ಅಭಿವೃದ್ಧಿ ಹೊಂದಿ ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಬಡದಾನಿ ಮಾತನಾಡಿ, ಕ್ರೀಡೆಗಳು ಮಕ್ಕಳ ದೈಹಿಕ ಸದೃಢತೆಯೊಂದಿಗೆ ಮಾನಸಿಕ ಸಾಮರ್ಥ್ಯವನ್ನೂ ಹೆಚ್ಚಿಸುತ್ತವೆ. ಕ್ರೀಡಾ ಸ್ಪರ್ಧೆಗಳಲ್ಲಿ ಸೋಲನ್ನು ಸವಾಲಾಗಿ ಸ್ವೀಕರಿಸಿ, ಅದನ್ನೇ ಮುಂದಿನ ಗೆಲುವಿಗೆ ಮೆಟ್ಟಿಲಾಗಿಸಿಕೊಳ್ಳಬೇಕು. ’ಸೋಲು ಮುಂದಿನ ಗೆಲುವಿಗೆ ನಾಂದಿ’ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ಸಂಸ್ಥೆ ನಿರ್ಮಿಸುವ ಸಂಕಲ್ಪದೊಂದಿಗೆ ಆರಂಭವಾದ ಈ ಶಾಲೆಯಲ್ಲಿ ಕೇವಲ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದು ಸಂಸ್ಥೆಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದರು.ಸಂಸ್ಥೆಯ ಸಂಸ್ಥಾಪಕ ಶಿವನಗೌಡ ಬಿರಾದಾರ ಮಾತನಾಡಿ, ಕಳೆದೆರಡು ವರ್ಷಗಳಿಂದ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದೆ. ಮಕ್ಕಳಲ್ಲದೆ ಅವರ ಪಾಲಕರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಈ ಬಾರಿಯ ಕ್ರೀಡೋತ್ಸವವನ್ನು ಮೂರು ದಿನಗಳ ಕಾಲ ಆಯೋಜಿಸಲಾಗಿದ್ದು, ಕೊನೆಯ ದಿನ ಪಾಲಕರಿಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಬೆಳಗಲ್ಲ ಹಾಗೂ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಮಾತನಾಡಿದರು.

ಈ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಹಿಂದಿ ಶಿಕ್ಷಕ ಸೀತಾರಾಮ ಲಮಾಣಿ ಅವರು ಮಕ್ಕಳಿಂದ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಕಾರ್ಯಕ್ರಮಕ್ಕೂ ಮೊದಲು ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ 100 ಮೀಟರ್ ಓಟದ ಸ್ಪರ್ಧೆಗೆ ಚಾಲನೆ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಸುಮಂಗಳಾ ಬಿರಾದಾರ, ಗೀತಾ ಬಿರಾದಾರ, ಪ್ರಾಂಶುಪಾಲ ಅಶೋಕ ತುಪ್ಪದ, ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹಾಗೂ ಸತೀಶ ವಾಲಿಕಾರ ಉಪಸ್ಥಿತರಿದ್ದರು.ಪಲಕ್ ಹಜೇರಿ ಸ್ವಾಗತಿಸಿದರು. ರನ್ವಿತಾ ಅನ್ನಗೌನಿ, ರೀಷಿಕಾ ಸಜ್ಜಮ ಹಾಗೂ ರಾಜಮಾ ಕಂದಗಲ್ಲ ನಿರೂಪಿಸಿದರು. ಅಮೋಲಿಕ ಕುಲಕರ್ಣಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಮಕ್ಕಳು ಮನಸು ಮಾಡಿದರೇ ಯಾವುದೂ ಅಸಾಧ್ಯವಲ್ಲ
ಕಸಾಪ ಸೇವೆಗೆ ತೃಪ್ತಿಯಿದೆ, ಸಂತೃಪ್ತಿಯಿಲ್ಲ