ಚಿಂತೆ ದೂರ ಮಾಡುವ ಶಕ್ತಿ ಕ್ರೀಡೆಗಳಿಗಿದೆ: ಎಸ್ಪಿ ಡಾ.ಶೋಭರಾಣಿ

KannadaprabhaNewsNetwork |  
Published : Aug 10, 2026, 02:00 AM IST
9ಕೆಎಂಎನ್ ಡಿ23 | Kannada Prabha

ಸಾರಾಂಶ

ಯಾವುದೇ ಕೆಲಸಗಳನ್ನು ಮಾಡುವಾಗ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಚಿಂತೆಗಳು, ಯೋಜನೆಗಳು ಬರುತ್ತವೆ. ಆದರೆ, ಕ್ರೀಡಾಕೂಟಗಳಲ್ಲಿ ಯಾವುದೇ ಚಿಂತನೆಗಳು ಬರುವುದಿಲ್ಲ. ಕೇವಲ ಆಟಗಳಲ್ಲಿ ಗಮನವನ್ನು ಕ್ರೇಂದ್ರಿಕರಿಸುವ ಶಕ್ತಿ ಹೊಂದಿದೆ.

ಮಂಡ್ಯ:

ಕ್ರೀಡೆಗಳಿಗೆ ಮನುಷ್ಯನ ಮನಸ್ಸಿನಲ್ಲಿ ಚಿಂತೆಗಳನ್ನು ದೂರ ಮಾಡುವ ಶಕ್ತಿ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ತಿಳಿಸಿದರು.

ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಯಾವುದೇ ಕೆಲಸಗಳನ್ನು ಮಾಡುವಾಗ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಚಿಂತೆಗಳು, ಯೋಜನೆಗಳು ಬರುತ್ತವೆ. ಆದರೆ, ಕ್ರೀಡಾಕೂಟಗಳಲ್ಲಿ ಯಾವುದೇ ಚಿಂತನೆಗಳು ಬರುವುದಿಲ್ಲ. ಕೇವಲ ಆಟಗಳಲ್ಲಿ ಗಮನವನ್ನು ಕ್ರೇಂದ್ರಿಕರಿಸುವ ಶಕ್ತಿ ಹೊಂದಿದೆ ಎಂದರು.

ಯಾವುದೇ ಕ್ರೀಡೆಗಳಾಗಲಿ ಭಾಗವಹಿಸುವುದು ಮುಖ್ಯ. ಪತ್ರಕರ್ತರು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಖುಷಿಯ ವಿಚಾರ. ಎಲ್ಲಾ ತಂಡಗಳ ಆಟಗಾರರು ಭಾಗವಹಿಸಿ ಎಂದು ಶುಭ ಹಾರೈಸಿದರು.

ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಂ, ಕೆರಗೋಡು ಸೋಮಶೇಖರ್, ಜಿಲ್ಲಾಧ್ಯಕ್ಷ ಕೆ.ಎನ್.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಡಿ.ಶಶಿಧರ್ ಕಾಡುಕೊತ್ತನಹಳ್ಳಿ, ಖಜಾಂಚಿ ನಂಜುಂಡಸ್ವಾಮಿ ಸೇರಿದಂತೆ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು, ಜಿಲ್ಲೆಯ ಎಲ್ಲಾ ತಾಲೂಕು ಪತ್ರಕರ್ತರು ಭಾಗವಹಿಸಿದ್ದರು.

ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣೆಗೆ ಡೀಸಿ ಸೂಚನೆ

ಮಂಡ್ಯ:ಜಿಲ್ಲೆಯ ಕ್ರೀಡಾಂಗಣಗಳ ನಿರ್ವಹಣೆ, ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಅಗತ್ಯ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಕ್ರೀಡಾಂಗಣಗಳ ನಿರ್ವಹಣೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು. ಕ್ರೀಡಾಂಗಣಗಳ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಕ್ರೀಡಾಪಟುಗಳಿಗೆ ಉತ್ತಮ ವಾತಾವರಣ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಕ್ರೀಡಾಂಗಣಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳು, ನಿರ್ವಹಣೆಗೆ ಅಗತ್ಯ ಅನುದಾನ, ಕ್ರೀಡಾ ಪರಿಕರಗಳ ಸಂರಕ್ಷಣೆ ಹಾಗೂ ಸಾರ್ವಜನಿಕರ ಬಳಕೆಗೆ ಕ್ರೀಡಾಂಗಣಗಳನ್ನು ಸುಸಜ್ಜಿತವಾಗಿ ಕಾಯ್ದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಮನುಜಶ್ರೀ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿಸೂಚನೆ ರದ್ದುಪಡಿಸದಿದ್ದರೆ ಬೃಹತ್‌ ಹೋರಾಟ ಅನಿವಾರ್ಯ: ಬಿ.ಬಿ. ನಿಂಗಯ್ಯ
ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ದಾವಣಗೆರೆಯಲ್ಲೇ ನಡೆಯಲಿ