ಮಹಿಳೆಯರ ಸಬಲೀಕರಣಕ್ಕೆ ಕ್ರೀಡೆ ಸಹಕಾರಿ: ಆಶಾ

KannadaprabhaNewsNetwork |  
Published : Mar 16, 2026, 12:30 AM IST
೧೫ಕೆಎಂಎನ್‌ಡಿ-೩ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಮಾತನಾಡಿದರು. | Kannada Prabha

ಸಾರಾಂಶ

ಕ್ರೀಡೆಯಿಂದ ದೈಹಿಕ ಸದೃಢತೆ ಸಾಧಿಸುವುದಲ್ಲದೆ ಕ್ರಿಯಾಶೀಲತೆ ಬೆಳವಣಿಗೆ ಕಾಣುತ್ತದೆ. ಸದಾ ಚಟುವಟಿಕೆಯಿಂದ ಇರುವುದಕ್ಕೆ ಸಾಧ್ಯವಾಗುತ್ತದೆ. ಕ್ರೀಡೆಯಿಂದ ದೂರ ಉಳಿದರೆ ದೈಹಿಕ ಚಟುವಟಿಕೆಗಳಿಲ್ಲದೆ ರೋಗಗಳನ್ನು ಆಹ್ವಾನಿಸಿಕೊಳ್ಳಬೇಕಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಹಿಳೆಯರ ಸಬಲೀಕರಣ ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಹಿಳೆಯರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಮೈ ಭಾರತ್ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ದೈಹಿಕ ಸದೃಢತೆ ಸಾಧಿಸುವುದಲ್ಲದೆ ಕ್ರಿಯಾಶೀಲತೆ ಬೆಳವಣಿಗೆ ಕಾಣುತ್ತದೆ. ಸದಾ ಚಟುವಟಿಕೆಯಿಂದ ಇರುವುದಕ್ಕೆ ಸಾಧ್ಯವಾಗುತ್ತದೆ. ಕ್ರೀಡೆಯಿಂದ ದೂರ ಉಳಿದರೆ ದೈಹಿಕ ಚಟುವಟಿಕೆಗಳಿಲ್ಲದೆ ರೋಗಗಳನ್ನು ಆಹ್ವಾನಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರು ಕ್ಯೂಆರ್ ಕೋಡ್ (ಆನ್‌ಲೈನ್ )ಮೂಲಕ ೧,೨೦೦ ಕ್ಕೂ ಹೆಚ್ಚು ನೋಂದಣಿ ಮಾಡಿಕೊಂಡಿದ್ದಾರೆ. ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಕ್ರೀಡಾಕ್ಷೇತ್ರದಲ್ಲಿ ಸಾಧನೆಯನ್ನು ಮಾಡುವಂತೆ ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ನೆಹರು ಯುವ ಕೇಂದ್ರ ಅಧಿಕಾರಿ ಶ್ರುತಿ, ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಕುಮಾರಸ್ವಾಮಿ ಉಪಸ್ಥಿತರಿದ್ದರು.ನಾಳೆ ಡಾ.ಪು.ತಿ.ನ ರವರ 121ನೇ ಜನ್ಮ ದಿನೋತ್ಸವಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಪು.ತಿ.ನ ಟ್ರಸ್ಟ್ (ರಿ) ಮೇಲುಕೋಟೆ, ಜಿಲ್ಲಾ ಮಾಂಡವ್ಯ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಮಾ.17ರಂದು ಬೆಳಗ್ಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಕನ್ನಡದ ಮಹಾಕವಿ ಡಾ. ಪು.ತಿ.ನ ರವರ 121ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಡಾ.ಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಡಾ.ಪು.ತಿ.ನ ಟ್ರಸ್ಟ್ (ರಿ)ನ ಅಧ್ಯಕ್ಷ ಪ್ರೊ.ಎಂ.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಕಾರ್ಯದರ್ಶಿ, ಎಸ್.ಬಿ. ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ಡಾ.ಮೀರಾಶಿವಲಿಂಗಯ್ಯ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ಕನ್ನಡಪ್ರಭ ಪುರವಣಿ ಸಂಪಾದಕ ಕನ್ನಡ ಪ್ರಖ್ಯಾತ ಲೇಖಕರು ಜೋಗಿ ಪ್ರಧಾನ ಭಾಷಣ ಮಾಡುವರು.

ಜಿಪಂ ಸಿಇಒ ಕೆ.ಆರ್ ನಂದಿನಿ, ಜಿಲ್ಲಾ ಎಸ್ಪಿ ಶೋಭಾರಾಣಿ ವಿ.ಜೆ. ಕರ್ನಾಟಕ ಸಂಘ ಅಧ್ಯಕ್ಷರು ಡಾ.ಜಯಪ್ರಕಾಶ್‌ಗೌಡ ಭಾಗವಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಹಿಡಿಯಿರಿ: ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ಮಾನಸ
ಬಿಜೆಪಿ-ಜೆಡಿಎಸ್ ನಿಂದ ಪಾಠ ಕಲಿಯಬೇಕಿಲ್ಲ: ಶಾಸಕ ಕೆ. ಎಸ್. ಆನಂದ್