ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿ

KannadaprabhaNewsNetwork |  
Published : Oct 19, 2023, 12:45 AM IST
ಕ್ರೀಡಾ ಜ್ಯೋತಿಯನ್ನು ರವಿ ಗುಂಜೀಕರ ಸ್ವೀಕರಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಗದಗಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪಾಲಕರು, ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಲು ಪ್ರೋತ್ಸಾಹ,ತರಬೇತಿ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜಯಗಳಿಸುವಂತಾಗಬೇಕೆಂದರು.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರವಿ ಗುಂಜೀಕರ ಅಭಿಮತ

ಕನ್ನಡಪ್ರಭ ವಾರ್ತೆ ಗದಗಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪಾಲಕರು, ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಲು ಪ್ರೋತ್ಸಾಹ,ತರಬೇತಿ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜಯಗಳಿಸುವಂತಾಗಬೇಕೆಂದರು.ಗದಗ ಡಯಟ್ ಪ್ರಾ. ಜಿ.ಎಲ್.ಬಾರಾಟಕ್ಕೆ ಮಾತನಾಡಿ, ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಶಾರೀರಿಕ ಬೆಳವಣಿಗೆಯ ಜತೆಗೆ ಮಾನಸಿಕ ಬೆಳವಣಿಗೆ ವೃದ್ಧಿಯಾಗಲಿದೆ. ನಿರ್ಣಾಯಕ ನಿರ್ಣಯಕ್ಕೆ ಬದ್ದರಾಗಿ ಸಕ್ರಿಯವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಸಾಧನೆ ಮಾಡಿ ತಮ್ಮ ಜೀವನ ರೂಪಿಸಿಕೊಳ್ಳಿ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶರೀರ ಸಂಪತ್ತು ಇದ್ದಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ.ಅದರಂತೆ ಇಲಾಖೆ ಬೌದ್ಧಿಕ ಬೆಳವಣಿಗೆ ಜತೆಗೆ ದೈಹಿಕ ಮಾನಸಿಕ ಬೆಳವಣಿಗೆಗಾಗಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಮಕ್ಕಳು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಯಶಾಲಿಯಾಗಬೇಕು. ನಿರ್ಣಾಯಕರು ನ್ಯಾಯಯೂತವಾದ ನಿರ್ಣಯ ನೀಡಬೇಕೆಂದರು.ಈ ವೇಳೆ ಶಹರ ಕ್ಷೇತ್ರ ಶಿಕ್ಷಾಧಿಕಾರಿ ಆರ್.ಎಸ್. ಬುರಡಿ, ವಿ.ಎಂ. ಹಿರೇಮಠ, ವಸಂತ ಕಲಕಂಬಿ, ಕೆ.ಬಿ.ಕೊಣ್ಣೂರ, ಬಿ.ಎಫ್.ಪೂಜಾರ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಎಂ.ಎಂ. ಹವಳದ,ಶಹರ ದೈಹಿಕ ಶಿಕ್ಷಣ ಅಧೀಕ್ಷಕ ಜಿ.ಎಂ. ಜಗದೀಶ, ಗ್ರಾಮೀಣ ದೈಹಿಕ ಶಿಕ್ಷಣ ಅಧೀಕ್ಷಕ ಟಿ.ಎಸ್. ಪವಾರ, ಮುಂಡರಗಿ ದೈಹಿಕ ಶಿಕ್ಷಣ ಅಧೀಕ್ಷಕ ಬಸವಣ್ಣೇಪ್ಪ,ಎಂ.ಎಚ್.ಕುಚಬಾಳ, ಎಸ್.ಬಿ.ಮುಳಗುಂದ, ಹವಾಲ್ದಾರ್, ಜಿ.ಡಿ. ದಾಸರ, ಎಂ.ಕೆ.ಲಮಾಣಿ, ಬಿ.ಕೆ. ನಿಂಬನಗೌಡ್ರ, ಶಿವಾನಂದ ಗಿಡ್ನಂದಿ ಮುಂತಾದವರು ಉಪಸ್ಥಿತರಿದ್ದರು.

ಪಿ.ಕೆ.ಅವರಡ್ಡಿ ನಿರೂಪಿಸಿದರು. ಕ್ರೀಡಾಪಟುಗಳಿಗೆ ಎಸ್.ಬಿ. ಮುಳಗುಂದ ಪ್ರತಿಜ್ಞೆ ಬೋಧಿಸಿದರು.ಎಂ.ಎಚ್.ಕುಚಬಾಳ ಸ್ವಾಗತಿಸಿದರು.ಎಂ.ವಿ.ಪಾಟೀಲ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳು ಬಾಲ್ಯದಲ್ಲೇ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ವಿವೇಕಾನಂದಗೌಡ ಪಾಟೀಲ
ಕವಿವಿ ಪದವಿ ಪರೀಕ್ಷೆ ಎಡವಟ್ಟು: ವಿದ್ಯಾರ್ಥಿಗಳಿಗೆ ಶಾಕ್‌