ಕನ್ನಡಪ್ರಭ ವಾರ್ತೆ ಶಿಕಾರಿಪುರ
ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ,ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, 2023 ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಪ್ರಮುಖ ಕಾಲಘಟ್ಟ. ಕೇವಲ ಪಠ್ಯ ಪುಸ್ತಕ ಅಂಕಗಳಿಗೆ ಮಾತ್ರ ಸೀಮಿತವಾಗದೇ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸರ್ವತೋಮುಖ ವ್ಯಕ್ತಿತ್ವ ರೂಪಿಸಿಕೊಳ್ಳಿ. ಕಾಲಹರಣದಿಂದ ಬದುಕನ್ನು ಕತ್ತಲಾಗಿಸಿಕೊಳ್ಳದಂತೆ ಶಿಸ್ತು, ಸಂಯಮ ರೂಢಿಸಿಕೊಂಡು ಜಾಗ್ರತೆಯಿಂದ ವರ್ತಿಸಿ ಎಂದು ತಿಳಿಸಿದರು.ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಶಿಕ್ಷಣದಿಂದ ಕಟ್ಟಕಡೆಯ ವ್ಯಕ್ತಿ ವಂಚಿತನಾಗದಂತೆ ಹಲವು ಸೌಲಭ್ಯ ಕಲ್ಪಿಸಿದೆ. ಸುಸಜ್ಜಿತ ಕಾಲೇಜು, ಹಾಸ್ಟೆಲ್, ನುರಿತ ಉಪನ್ಯಾಸಕರ ಸಹಿತ ಅಗತ್ಯವಿರುವ ಎಲ್ಲ ಸೌಲಭ್ಯ ಒದಗಿಸಿದೆ. ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತರುವಂತೆ ಮಾಡಲು ಸಹಕಾರ ಸಮಿತಿ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.