ಸರ್ಕಾರಿ ನೌಕರ ವರ್ಗದವರಿಗೆ ವರ್ಷಕ್ಕೊಮ್ಮೆ ಇಂತಹ ಕಾರ್ಯಕ್ರಮಗಳು ಅಲ್ಪ ರಂಜನೆ ನೀಡಲಿದೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ ತಾಲೂಕು ಶಾಖೆ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾಶಾಲಾ ಮೈದಾನದಲ್ಲಿ ಕೊಡಗು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿತ್ತು. ಎರಡು ದಿನಗಳ ಸ್ಪರ್ಧಾ ಕಾರ್ಯಕ್ರಮವನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಿ ಮಾತನಾಡಿ, ಸದಾ ಒತ್ತಡ ಹಾಗೂ ಕಡತಗಳ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರ ವರ್ಗದವರಿಗೆ ವರ್ಷಕ್ಕೊಮ್ಮೆ ಇಂತಹ ಕಾರ್ಯಕ್ರಮಗಳು ಅಲ್ಪ ರಂಜನೆ ನೀಡಲಿದೆ. ಕ್ರೀಡಾಕೂಟಗಳ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನಿತ್ಯ ಜಂಜಾಟಗಳಿಂದ ಬಿಡುವು ದೊರೆಯುವ ಕಾರಣ ಹುಮ್ಮಸ್ಸು, ಹುರುಪು ಉಂಟಾಗಲಿದೆ ಎಂದರು. ಕೂಡಿಗೆ ಗ್ರಾಪಂ ಸದಸ್ಯ ಟಿ.ಪಿ. ಹಮೀದ್ ಮಾತನಾಡಿ, ಕೊಡಗಿನಲ್ಲಿ ಶೇ.30ರಷ್ಟು ಅಧಿಕಾರಿ ವರ್ಗದ ಕೊರತೆಯಿರುವುದು ಕಾಣಬಹುದು. ಇದರಿಂದಾಗಿ ಇರುವ ನೌಕರರು, ಸಿಬ್ಬಂದಿ ಮೇಲೆ ಹೆಚ್ಚಿನ ಒತ್ತಡ ಉಂಟುಮಾಡುತ್ತಿರುವುದು ಗಮನಿಸಬೇಕಾದ ಸಂಗತಿ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲೆಯ ಶಾಸಕರು ಕ್ರಮವಹಿಸಬೇಕು ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಮಾತನಾಡಿ, ಸರ್ಕಾರಿ ನೌಕಕರಲ್ಲಿ ಹಲವು ಮಂದಿಯಲ್ಲಿ ಉತ್ತಮ ಪ್ರತಿಭೆ ಅಡಗಿರುತ್ತದೆ. ಉದ್ಯೋಗದ ಜಂಜಾಟದಿಂದ ಪಾಲ್ಗೊಳ್ಖುವಿಕೆಗೆ ಸಾಧ್ಯವಾಗದಂತಹವರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರತಿಭೆಗಳ ಅನಾವರಣಕ್ಕೆ ಈ ವೇದಿಕೆ ಅನುಕೂಲಕರವಾಗಲಿದೆ ಎಂದರು. ಸಂಘದ ಕೊಡಗು ಶಾಖೆ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೂಡುಮಂಗಳೂರು ಗ್ರಾಮ ಸದಸ್ಯೆ ಫಿಲೋಮಿನಾ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ರಾವ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಮೂಡ್ಲಿಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿ.ಎಸ್.ಸುಗುಣಾನಂದ, ತಾಲೂಕು ಅಧ್ಯಕ್ಷ ಪ್ರದೀಪ್, ಉಪಾಧ್ಯಕ್ಷ ದಯಾನಂದ ಪ್ರಕಾಶ್, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ರಾಜ್ಯ ಪ್ರಶಸ್ತಿ ದೈಹಿಕ ಶಿಕ್ಷಕ ಪೂರ್ಣೇಶ್, ಸಂಘದ ಪ್ರಸನ್ನಕುಮಾರ್, ಕ್ರೀಡಾ ಶಾಲಾ ಮುಖ್ಯ ಶಿಕ್ಷಕ ದೇವ್ ಕುಮಾರ್, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಮೀನುಗಾರಿಕೆ ಇಲಾಖೆಯ ಮಿಲನ ಭರತ್, ನೌಕರ ವರ್ಗದ ವಿವಿಧ ಸಂಘಟನೆಗಳು ಪ್ರಮುಖರು ಇದ್ದರು. ಇದೇ ಸಂದರ್ಭ ರಾಜ್ಯ,ರಾಷ್ಟ್ರಮಟ್ಟದ ಸಾಧಕ ನೌಕರರನ್ನು ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.